ಲೋಕಸಭೆ ಚುನಾವಣೆ: ಮತದಾನದ 2 ದಿನ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು, ಮಾ 30: ಮುಂಬರುವ ಲೋಕಸಭಾ ಚುನಾವಣೆಯ ಏಪ್ರಿಲ್ 26 ಹಾಗೂ 2ನೇ ಹಂತದ ಮತದಾನ, ಮೇ 7 ರಂದು ನಿಗದಿಯಾಗಿದ್ದು. ಹೀಗಾಗಿ ರಾಜ್ಯದಲ್ಲಿ ಚುನಾವಣೆಯ ಎರಡೂ ದಿನವೂ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ. ಹಾಗೂ ಎರಡನೇ ಹಂತದ ಮತದಾನವು ಮೇ 7 ರಂದು ನಡೆಯಲಿದೆ. ಮತದಾನ ನದೆಯುವ ಈ ಎರಡೂ ದಿನಗಳಂದು ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ – ಕಾಲೇಜುಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಿಸಿರುವುದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ಹೇಳಿದ್ದಾರೆ. ಇನ್ನು ಈ ಎರಡು ದಿನಗಳಂದು ಪ್ರತಿಯೊಬ್ಬರು ಮತದಾನ ಮಾಡಲಿ ಎಂಬ ಉದ್ದೇಶದಿಂದ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!