ಪೇಜಾವರಶ್ರೀ ಆಶೀರ್ವಾದ ಪಡೆದ ದ.ಕ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರು ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಪ್ರದೀಪ್ ಕುಮಾರ್ ಕಲ್ಕೂರ ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸ್ವಾಮೀಜಿಯವರು ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಶಾಲು ಹೊದಿಸಿ ಫಲಮಂತ್ರಾಕ್ಷತೆ ನೀಡಿ ಆಶೀರ್ವಾದಿಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಕಾಶ್ ಪೂಜಾರಿ ಗರೋಡಿ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!