ಮೋದಿ ಪ್ರಧಾನಿಯಾದ ನಂತರ ಹಿಂದೂ ಜೀವನ ಪದ್ಧತಿಗೆ ವಿಶ್ವಮನ್ನಣೆ: ಕ್ಯಾ.ಬ್ರಜೇಶ್‌

ಮುಲ್ಕಿ ಮೂಡಬಿದರೆ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕ್ಯಾಪ್ಟನ್ ಬ್ರಜೇಶ್ ಚೌಟ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯ ಆದ ಬಳಿಕ ಹಿಂದೂ ಜೀವನ ಪದ್ಧತಿಗೆ ವಿಶ್ವದಲ್ಲಿ ಮನ್ನಣೆ ಸಿಕ್ಕಿದೆ ಎಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟರ ಎರಡನೇ ಹಂತದ ಪ್ರವಾಸದ ಎರಡನೇ ದಿನವಾದ ಇಂದು ಮುಲ್ಕಿ ಮೂಡಬಿದರೆ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಕಿನ್ನಿಗೋಳಿ ಯುಗಪುರುಷ ಹಾಲಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ್‌ ಕೊಟ್ಯಾನ್‌, ಡಾ.ಭರತ್‌ ಶೆಟ್ಟಿ, ಹರೀಶ್‌ ಪೂಂಜಾ, ಪಕ್ಷದ ಮುಖಂಡರುಗಳು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಶನಿವಾರ ನಡೆದ ಚುನಾವಣಾ ಪ್ರಚಾರದ ಮದ್ಯೆ ಬ್ರಿಜೇಶ್‌ ಚೌಟಾ ಅವರು ಉಡುಪಿಯ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರದೀಪ್‌ ಕುಮಾರ್‌ ಕಲ್ಕೂರ ರವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದು ಕೊಂಡರು. ನಂತರ ಅವರು ಮುಲ್ಕಿ ಅರಮೆನೆಯ ಅರಸರಾದ ದುಗ್ಗಣ್ಣ ಸಾವಂತರನ್ನು ಮುಲ್ಕಿ ಅರಮನೆಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ದರ್ಶನ ಮಾಡಿದರು.

Leave a Reply

Your email address will not be published. Required fields are marked *

error: Content is protected !!