ಮೂರು ದಶಕದ ಬಳಿಕ ಬಿಜೆಪಿಗೆ ಲಿಂಗಾಯತ ಸಮುದಾಯ ಟಕ್ಕರ್…! ಪ್ರಲ್ಹಾದ್ ಜೋಶಿಯನ್ನು ಸೋಲಿಸುತ್ತೇವೆ…!

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಸ್ಥಾನಗಳನ್ನು ಜಯಿಸಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಆದರೆ ಲಿಂಗಾಯತ ಸಮುದಾಯದ ಸಮೀಕರಣದ ಲೆಕ್ಕಾಚಾರದಲ್ಲಿ ತಪ್ಪಾಗಿ ಕಾಣುತ್ತಿದೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಕಣಕ್ಕಿಳಿಸಿದರೆ ಸೋಲಿಸುತ್ತೇನೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ನೀಡಿರುವುದು ಬಿಜೆಪಿಗೆ ಬಿಸಿ ತುಪ್ಪವಾಗಿದೆ. ಶಿರಹಟ್ಟಿ ಫಕೀರೇಶ್ವರ ಮಠದ ಮಠಾಧೀಶರಾದ ದಿಂಗಾಲೇಶ್ವರ ಸ್ವಾಮಿಗಳು ಏಪ್ರಿಲ್ 2 ರಂದು ಮಠಾಧೀಶರ ಸಭೆ ಕರೆದಿದ್ದಾರೆ. ಅವರ ಅಭಿಪ್ರಾಯ ಪಡೆಯಲು ಸ್ವಾಮೀಜಿಗಳ ಸಭೆ ನಡೆಸಲಾಗಿದ್ದು, ಈಗ ಭಕ್ತರ ಸಭೆಯನ್ನು ಕರೆಯಲಾಗುತ್ತಿದೆ, ಅಂತಿಮ ನಿರ್ಧಾರ ಕೈಗೊಳ್ಳಲು ಮತ್ತೊಂದು ಸುತ್ತಿನ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮಿ ಬಹಿರಂಗವಾಗಿಯೇ ಹೇಳಿದ್ದು, ಧಾರವಾಡ ಸಂಸದ ಅಭ್ಯರ್ಥಿಯನ್ನು ಬದಲಾವಣೆ ಮಾಡುವಂತೆ ಕರೆ ನೀಡಿದ್ದಾರೆ. ನಾನು ಸ್ವಂತವಾಗಿ ಮಾತನಾಡುತ್ತಿಲ್ಲ, ಪ್ರಲ್ಹಾದ್ ಜೋಶಿಯವರ ಕೈಯಲ್ಲಿ ನೋವು ಅನುಭವಿಸಿದ ಜನರ ಧ್ವನಿಗಾಗಿ ನಾನು ಹೋರಾಟ ನಡೆಸುತ್ತಿದ್ದೇನೆ. ಅವರ ಆಡಳಿತ ವಿನಾಶಕಾರಿಯಾಗಿದೆ, ತಮ್ಮ ನಿಲುವು ಬದಲಿಸುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಆದರೆ ಈ ಬಗ್ಗೆ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಲು ನಿರಾಕರಿಸಿದರು.

Leave a Reply

Your email address will not be published. Required fields are marked *

error: Content is protected !!