ಗಂಗೊಳ್ಳಿ: ಲಾರಿ ಢಿಕ್ಕಿ- ಬೈಕ್ ಸವಾರ ಮೃತ್ಯು

ಗಂಗೊಳ್ಳಿ: ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಗಂಗೊಳ್ಳಿ ಅಂಚೆ ಕಚೇರಿ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಮುಹಮ್ಮದ್ ಕಾಶಿಫ್(17) ಎಂದು ಗುರುತಿಸಲಾಗಿದೆ. ಸಹಸವಾರ ಮುಹಮ್ಮದ್ ಫೈಝ್(14) ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನವು ಕೂಡಲೇ ಆಂಬ್ಯುಲೆನ್ಸ್ ಕರೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ತಂಡ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದು, ಅದರಲ್ಲಿ ಗಂಭೀರವಾಗಿ ಗಾಯಗೊಂಡ ಕಾಶಿಫ್ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!