ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ
ಉಡುಪಿ, ಎ.1(ಉಡುಪಿ ಟೈಮ್ಸ್ ವರದಿ): ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷ ಆದೇಶ ಮಾಡಿದೆ.
ಪಕ್ಷದ ಉಪಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದ ಕಿಶನ್ ಹೆಗ್ಡೆಯವರು ಕಳೆದ ಒಂದು ವರ್ಷದ ಹಿಂದೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು.
ಲೋಕ ಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಹೊಸ ಅಧ್ಯಕ್ಷರನ್ನು ಘೋಷಣೆ ಮಾಡಿದ್ದು, ಈಗಾಗಲೇ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರವೂ ನಿರಂತರವಾಗಿ ಬಿಜೆಪಿ ವಶದಲ್ಲಿದೆ. ನೂತನ ಅಧ್ಯಕ್ಷರು ಪಕ್ಷವನ್ನು ಸಂಘಟಿಸಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ಪಡೆಯಬೇಕಾಗಿದೆ.