ಸಾವಿರಾರು ಜನರ ಪ್ರಾರ್ಥನೆಯ ಫಲವಾಗಿ ಕೊಳವೆಬಾವಿಯಿಂದ ಜೀವಂತವಾಗಿ ಹೊರಬಂದ ಮಗು
ವಿಜಯಪುರ: ಬುಧವಾರ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ 2 ವರ್ಷದ ಮಗು ಸಾತ್ವಿಕ್ ಮುಜಗೊಂಡ ಕೊಳವೆ ಬಾವಿಗೆ ಬಿದ್ದಿದ್ದು ಇದೀಗ ಸಾವಿರಾರು ಜನರ ಪ್ರಾರ್ಥನೆ ಫಲಿಸಿ 18 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಎಸ್ಡಿಆರ್ಎಫ್, ಎನ್ಡಿಆರ್ಎಫ್ ತಂಡವು ಮಗುವನ್ನು ಜೀವಂತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬುಧವಾರ ಸಂಜೆ 6 ಗಂಟೆಗೆ ಕೊಳವೆ ಬಾವಿಗೆ ಬಿದ್ದ ಮಗು 18 ಗಂಟೆಗಳಿಂದ ಅನ್ನ ನೀರು ಇಲ್ಲದೆ ಜೀವನ್ಮರಣ ಹೋರಾಟ ನಡೆಸುತ್ತಿತ್ತು. ಮಗುವನ್ನು ಹೊರ ತೆಗೆದ ತಕ್ಷಣ ಪ್ರಥಮ ಚಿಕಿತ್ಸೆ ನೀಡಿದ ವೈದ್ಯರ ತಂಡ ಬಳಿಕ ಆಂಬುಲೆನ್ಸ್ನಲ್ಲಿ ಮಗುವನ್ನು ಇಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದೆ.ಮಗು ಬಾವಿಗೆ ಬಿದ್ದ ತಕ್ಷಣ ಅರ್ಧ ಗಂಟೆ ಊರವರು ಮತ್ತು ಸ್ಥಳೀಯರು ಮಗುವಿನ ರಕ್ಷಣೆಗೆ ಮುಂದಾಗಿದ್ದು ಆದರೆ ಸಾಧ್ಯವಾಗದೇ ಇದ್ದಾಗ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ನಿನ್ನೆ ಸಂಜೆಯಿಂದ ಇಂದು ಬೆಳಗ್ಗೆ 11 ಗಂಟೆಯವರೆಗೆ ಒಂದು ನಿಮಿಷವೂ ಬಿಡುವು ನೀಡದೆ ನಿರಂತರ ಕಾರ್ಯಾಚರಣೆ ನಡೆಸಿದ್ದರು. ಮಗುವಿನ ಚಲನವಲನಗಳ ಬಗ್ಗೆ ಕ್ಯಾಮಾರದಲ್ಲಿ ಸೆರೆಹಿಡಿಯಲಾಗಿತ್ತು. ಮಗು ಕಾಲು ಅಲ್ಲಾಡಿಸುತ್ತಿರುವುದು ಕ್ಯಾಮರಾದಲ್ಲಿ ಸರಿಯಾಗಿತ್ತು. ಬಳಿಕ ಮಗುವಿಗೆ ಆಕ್ಸಿಜನ್ ವ್ಯವಸ್ಥೆ ಕೂಡ ಮಾಡಲಾಗಿತ್ತು. ಕೊನೆಗೂ ಸತತ 18 ಗಂಟೆಗಳ ಕಾರ್ಯಾಚರಣೆಯ ಬಳಿಕ ಸಾವಿರಾರು ಜನರ ಪ್ರಾರ್ಥನೆಯ ಫಲವಾಗಿ ಮಗು ಜೀವಂತವಾಗಿ ಹೊರಬಂದಿದೆ.
When will we punish the person kept the well open!?