ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆ: 5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್​’

ಬೆಂಗಳೂರು, ಎ.4: ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮುಂದಿನ ಏ.5 ರಿಂದ 10 ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಐದು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!