ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ- ಮದ್ಯ, 1.79 ಲಕ್ಷ ನಗದು ವಶ
ಉಡುಪಿ, ಎ.6: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯಿಂದ 12,830 ರೂ. ಮೌಲ್ಯದ 75.060 ಲೀ ಮದ್ಯ ಹಾಗೂ ಎಸ್‌ಎಸ್‌ಟಿ ತಂಡದಿಂದ 1,79,400 ರೂ. ನಗದನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.