ಕಟಪಾಡಿ: ಬಸ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಪಾದಚಾರಿಗೆ ಎಕ್ಸ್ ಪ್ರೆಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಇಂದು ರಾತ್ರಿ ನಡೆದಿದೆ.

ಗಾಯಾಳುವನ್ನು ವಾದನ ತಂಡವೊಂದರ ವಾದಕ, ಸ್ಥಳೀಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ಕುಮಾರ್ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಗಾಯಾಳುವನ್ನು ಸಮಾಜ ಸೇವಕರು, ಸ್ಥಳೀಯರ ಸಹಕಾರದಿಂದ ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಕುಮಾರ್ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಅಪಘಾತದಿಂದ ಹೆದ್ದಾರಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕಟಪಾಡಿ ಹೊರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!