ಸುದ್ದಿಗೋಷ್ಠಿಯೊಂದೆ ಸಂಸದ ಬಿ.ವೈ. ರಾಘವೇಂದ್ರ ಸಾಧನೆ: ಗೋಪಾಲ ಪೂಜಾರಿ

ಬೈಂದೂರು: ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಸುದ್ದಿಗೋಷ್ಠಿ ನಡೆಸಿರುವುದೇ ದೊಡ್ಡ ಸಾಧನೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಟೀಕಿಸಿದರು.

ಸಾಮಾನ್ಯರ ನೋವು ಸಂಸದ ರಾಘವೇಂದ್ರ ಅವರಿಗೆ ತಿಳಿದಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಕ್ಷೇತ್ರಕ್ಕೆ ಅನ್ಯಾಯ ಮಾಡಿದ್ದಾರೆ. ಅದೇ, ರೀತಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಹಿಂದಿನ ಸೋಲಿಗೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಕುಮಾರ್ ಅವರಿಗೆ ಬೆಂಬಲಿಸುವ ಮೂಲಕ ನ್ಯಾಯ ಒದಗಿಸಬೇಕಿದೆ ಎಂದರು.

ಇದಕ್ಕೂ ಮೊದಲು ಬೈಂದೂರು ವಿಧಾನಸಭಾ ಕ್ಷೇತ್ರದ ಕಂಬದಕೋಣೆ ಗ್ರಾಮೀಣ ಕಾಂಗ್ರೆಸ್ ಘಟಕದಿಂದ ಆಯೋಜಿಸಲಾಗಿದ್ದ ಗ್ರಾಮ ಪಂಚಾಯತಿ ಮಟ್ಟದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಜಟಿಗೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷೇತ್ರದೊಡೆಯನಲ್ಲಿ ಸರ್ವರ ಒಳಿತಿಗಾಗಿ ಪ್ರಾರ್ಥಿಸಲಾಯಿತು.

ಈ ಸಂಧರ್ಭದಲ್ಲಿ ಖ್ಯಾತ ಚಲನಚಿತ್ರ ನಟರಾದ ಡಾ. ಶಿವರಾಜ್ ಕುಮಾರ್, ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ, ಶಿವಮೊಗ್ಗ ಲೋಕಸಭಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬೈಂದೂರು ಉಸ್ತುವಾರಿ ಜಿ.ಎ ಭಾವ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಜು ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅರವಿಂದ ಪೂಜಾರಿ, ಪ್ರದೀಪ್ ಶೆಟ್ಟಿ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!