ದ್ವಿತೀಯ ಪಿಯುಸಿ ಫಲಿತಾಂಶ- ಶೇ.81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ: ದ.ಕ ಜಿಲ್ಲೆ ಪ್ರಥಮ
ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ.
ದಕ್ಷಿಣ ಕನ್ನಡ ಮೊದಲ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆ ರಾಜ್ಯದಲ್ಲೇ ದ್ವಿತೀಯ ಸ್ಥಾನ ಪಡೆದಿದೆ.
ವಿಜ್ಞಾನ ವಿಭಾಗದಲ್ಲಿ ವಿದ್ಯೋದಯ ಪಿಯು ಕಾಲೇಜಿನ ವಿದ್ಯಾರ್ಥಿನಿ ವೈಭವಿ ಆಚಾರ್ಯ 597 ಅಂಕ, ಕಾರ್ಕಳ ಜ್ಞಾನ ಸುಧಾ ಕಾಲೇಜಿನ ವಿದ್ಯಾರ್ಥಿ ಸಮ್ಯಕ್ ಆರ್. ಪ್ರಭು 595 ಅಂಕ, ವಾಣಿಜ್ಯ ವಿಭಾಗದಲ್ಲಿ ಪೂರ್ಣಪ್ರಜ್ಞ ಪಿಯು ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ಎಸ್.ಎಚ್ 596 ಅಂಕ ಪಡೆಯುವ ಮೂಲಕ ರಾಜ್ಯ ಟಾಪರ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.ಉಡುಪಿ ಜಿಲ್ಲೆ ಹೊಸ ವಿದ್ಯಾರ್ಥಿಗಳ ಒಟ್ಟಾರೆ ಶೇ.96.80 ಫಲಿತಾಂಶ ಪಡೆದಿದ್ದಾರೆ. ಕಳೆದ ವರ್ಷ ಶೇ.95.24ರಷ್ಟು ಫಲಿತಾಂಶ ಪಡೆದಿದ್ದಾರೆ.
ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ https://karresults.nic.in ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಬಳಿಕ ಬೆಳಗ್ಗೆ 11 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು.
ವೆಬ್ ಸೈಟ್ ನಲ್ಲಿ ರಿಸಲ್ಟ್ ಚೆಕ್ ಮಾಡುವುದು ಹೇಗೆ?
ಹಂತ 1:ನೀವು https://karresults.nic.in/ ಎಂದು ಗೂಗಲ್‌ನಲ್ಲಿ ಸರ್ಚ್ ಮಾಡಿ ಪಿಯುಸಿಯ ಸಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಹಂತ 2: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3: ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಕ್ಲಿಕ್ ಮಾಡ್ಬೇಕು (ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ)
ಹಂತ 4: ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
ಹಂತ 5: ಈಗ ನೀವು ನಿಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.