ಉದ್ಯಾವರ: ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯರ ಸಹಿತ ಹಲವಾರು ಕಾಂಗ್ರೆಸ್ ಸೇರ್ಪಡೆ
ಉದ್ಯಾವರ: ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಇಂದು ಜರಗಿದ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯರಾದ ಫ್ರೀಡಾ ಡಿಸೋಜ ಮತ್ತು ಐವನ್ ಡಿಸೋಜಾ, ರಿಚಾರ್ಡ್ ಡಿಸೋಜಾ ಅವರು ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗಿರೀಶ್ ಕುಮಾರ್ ಮತ್ತು ಕಾಪು ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸಂತೋಷ್ ಕುಲಾಲ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಕಾಪು ಉತ್ತರ ವಲಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಚರಣ್ ವಿಠ್ಠಲ್, ಕಾಂಗ್ರೆಸ್ ಮುಖಂಡರಾದ ಉದ್ಯಾವರ ನಾಗೇಶ್ ಕುಮಾರ್, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ರಾಯ್ಸ್ ಫೆರ್ನಾಂಡಿಸ್, ಕಿಸಾನ್ ಘಟಕದ ಅಧ್ಯಕ್ಷರಾದ ಶೇಖರ್ ಕೋಟ್ಯಾನ್, ಪರಿಶಿಷ್ಟ ಘಟಕದ ಅಧ್ಯಕ್ಷರಾದ ಗಿರೀಶ್ ಗುಡ್ಡೆಅಂಗಡಿ, ಪ್ರಚಾರ ಸಮಿತಿಯ ಕಾರ್ಯದರ್ಶಿಗಳಾದ ಸುಹೇಲ್ ರಹಮತ್, ಪಂಚಾಯತ್ ಸದಸ್ಯರಾದ ನಿತಿನ್ ಜೆ. ಸಾಲಿಯಾನ್, ದಿವಾಕರ್ ಬೊಳ್ಜೆ, ಆಶಾವಾಸು, ಆಶಾ ಸುರೇಶ್ ,ಲೋರೆನ್ಸ್ ಡೇಸಾ,ಪೂರ್ಣಿಮಾ, ಮಧುಲತಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೆಲೆನ್ ಫೆರ್ನಾಂಡಿಸ್ ಮೊದಲಾದವರು ಉಪಸ್ಥಿತರಿದ್ದರು.