ಮಣಿಪಾಲ: ರೈಲಿಗೆ ಅಡ್ಡ ಬಂದು ಮೀನುಗಾರ ಆತ್ಮಹತ್ಯೆ
ಮಣಿಪಾಲ ಎ.11(ಉಡುಪಿ ಟೈಮ್ಸ್ ವರದಿ): ಚಲಿಸುತ್ತಿದ್ದ ರೈಲಿಗೆ ಅಡ್ಡ ಬಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕಲ್ಮಾಡಿ ನಿವಾಸಿ ದೀಕ್ಷಿತ್(32) ಆತ್ಮಹತ್ಯೆ ಮಾಡಿಕೊಂಡವರು.
ಮದ್ಯಪಾನ ಮಾಡುವ ಹವ್ಯಾಸ ಹೊಂದಿದ್ದ ಇವರಿಗೆ ಇಂದು ಬೆಳಗ್ಗಿನ ಜಾವ ಇಂದ್ರಾಳಿ ರೈಲ್ವೇ ನಿಲ್ದಾಣದ ರೈಲ್ವೇ ಹಳಿಯಲ್ಲಿ ಚಲಿಸುವ ರೈಲು ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ದೀಕ್ಷಿತ್ ಅವರು ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ.
ದೀಕ್ಷಿತ್ ಅವರು ಯಾವುದೋ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ರೈಲ್ವೇ ಹಳಿಯಲ್ಲಿ ಚಲಿಸುವ ರೈಲಿ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಚಿನ್ ಎಂಬವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.