ಮಂಗಳೂರು: 5.64 ಕೋಟಿ ರೂ.ಮೌಲ್ಯದ ಮದ್ಯ ವಶಕ್ಕೆ

ಮಂಗಳೂರು, ಏ.14: 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪಿಲ್ 5ರವರೆಗೆ ಜಿಲ್ಲೆಯಲ್ಲಿ 5,64,80,734 ರೂ. ಮೌಲ್ಯದ 1,42,160 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 816 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!