ಮುಂದಿನ 5 ವರ್ಷಗಳಲ್ಲಿ ಭಾರತ ವಿಶ್ವದಲ್ಲೇ ಅರ್ಥಿಕ ಸಬಲೀಕರಣದಲ್ಲಿ ಪ್ರಥಮ ಸ್ಥಾನಕ್ಕೆ- ರಾಜ್ ನಾಥ್ ಸಿಂಗ್
ಕಾಸರಗೋಡು,ಏ.17: ಮುಂದಿನ ಐದು ವರ್ಷಗಳಲ್ಲಿ ಭಾರತ ವಿಶ್ವದಲ್ಲೇ ಅರ್ಥಿಕ ಸಬಲೀಕರಣದಲ್ಲಿ ಪ್ರಥಮ ಸ್ಥಾನಕ್ಕೆ ತಲುಪಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಹೇಳಿದರು.
ಅವರು ಬುಧವಾರ ಬೆಳಿಗ್ಗೆ ಕಾಸರಗೋಡು ತಾಲಿಪಡ್ಪು ಮೈದಾನದಲ್ಲಿ ಎನ್ ಡಿ ಎ ಚುನಾವಣಾ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮಾತನಾಡಿ, ಎನ್ ಡಿಎ ನೇತೃತ್ವದ ಕೇಂದ್ರ ಸರಕಾರ ರಾಷ್ಟ್ರದ ಭದ್ರತೆಗೆ ವಿಶೇಷ ಆದ್ಯತೆ ನೀಡಿದೆ. ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ. ದೇಶದ ಭದ್ರತೆ, ಅಖಂಡತೆ ಹಾಗೂ ಸಮಗ್ರತೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಅಭಿಪ್ರಾಯಪಟ್ಟರು.
ಕೇರಳದಲ್ಲಿ ಪರಸ್ಪರ ಆರೋಪ – ಪ್ರತ್ಯಾರೋಪ ಮಾಡುವ ಎಡ – ಬಲ ಪಕ್ಷಗಳು ದೆಹಲಿಯಲ್ಲಿ ಒಂದಾಗುತ್ತಿವೆ. ಕಮ್ಯೂನಿಸ್ಟ್ ಪಕ್ಷಗಳು ಅಸ್ವಿತ್ವ ಕಳೆದುಕೊಂಡಿದೆ ಎಂದು ಹೇಳಿದರು. ಕಾಸರಗೋಡು ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ, ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರ್, ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್, ಕೆ.ರಂಜಿತ್ , ಎಂ.ನಾರಾಯಣ ಭಟ್, ಬಿಡಿಜೆಸ್ ಜಿಲ್ಲಾಧ್ಯಕ್ಷ ಗಣೇಶ್ ಪಾರೆಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.