ಜಯಪ್ರಕಾಶ್ ಹೆಗ್ಡೆ ವಿರುದ್ಧ ಮಾನಹಾನಿ ಸುದ್ದಿ ಪ್ರಕಟ: ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ದಾಖಲು
ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಬಗ್ಗೆ ಮಾನಹಾನಿ ಹಾಗೂ ಅಸಂವಿಧಾನಿಕ ಪದ ಬಳಕೆ ಮಾಡಿದ ಆರೋಪದ ಮೇಲೆ ನಿಟ್ಟೆ ನಿವಾಸಿ ಸಂದೀಪ್ ಶೆಟ್ಟಿ, ಹಂದಟ್ಟು ನಿವಾಸಿ ಪ್ರಕಾಶ್ ಪೂಜಾರಿ, ಉಡುಪಿ ನಿವಾಸಿ ಸಂಜಿತ್ ಕೋಟ್ಯಾನ್, ವಾಸ್ತವ್ ಇವರುಗಳು ಬಿಜೆಪಿ ಕಾರ್ಯಕರ್ತರಾಗಿದ್ದು ತಮ್ಮ ಬಿಜೆಪಿ ಅಭ್ಯರ್ಥಿಗೆ ಅನುಕೂಲವಾಗುವಂತೆ 1995ರಲ್ಲಿ ಬ್ರಹ್ಮಾವರದಲ್ಲಿ ನಡೆದ ಪ್ರಕರಣ ಒಂದರ ಕುರಿತು ಕಪೋ ಕಲ್ಪಿತ ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುತ್ತಾರೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡ ಸುರೇಂದ್ರ ಶೆಟ್ಟಿ ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ.