ಉಡುಪಿ: ಬಸ್-ಬೈಕ್ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಬಸ್ ಮತ್ತು ಬೈಕ್ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಮೃತ ಬೈಕ್ ಸವಾರ ಬಾದಮಿ ತಾಲೂಕಿನ ಬಸಪ್ಪ (30) ಎಂದು ತಿಳಿದುಬಂದಿದೆ. ಅಂಬಾಗಿಲಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಇವರು ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ‌ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!