ಅನ್ಯಾಯ ಸಾಕು, ನ್ಯಾಯ ಕೊಡಿ ಚೊಂಬೇಶ್ವರ, ಬರ ಪರಿಹಾರ ಬಿಡುಗಡೆ ಮಾಡಿ: ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಗಳೂರಿಗೆ ಭೇಟಿ ನೀಡುವುದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಲು ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ವಿಧಾನ ಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು. ಬರದಿಂದ ಕರ್ನಾಟಕದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದ ಸಿಎಂ ಸಿದ್ದರಾಮಯ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಬರ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು.

ಕರ್ನಾಟಕಕ್ಕೆ ನ್ಯಾಯ ಕೊಡಿ, ಬರ ಪರಿಹಾರ ಕೂಡಲೇ ಬಿಡುಗಡೆ ಮಾಡಿ ಚೊಂಬೇಶ್ವರ’ ಎಂದು ಒಕ್ಕೊರಲಿನಿಂದ ಕಾಂಗ್ರೆಸ್ ನಾಯಕರು ಆಗ್ರಹಿಸಿದರು. ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಘೋಷಣೆ ಕೂಗಿದರು. ಕರ್ನಾಟಕಕ್ಕೆ ಬಿಜೆಪಿ ಖಾಲಿ ಚೊಂಬು ಕೊಟ್ಟಿದೆ, ಆದ್ದರಿಂದ ಬೇಡ ಬೇಡ ಖಾಲಿ ಚೊಂಬು ಬೇಡ, ನರೇಂದ್ರ ಚೊಂಬೇಶ್ವರನಿಗೆ, ಭಾರತೀಯ ಚೊಂಬು ಪಾರ್ಟಿಗೆ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮೋದಿ ಗೋ ಬ್ಯಾಕ್, ಗೋಬ್ಯಾಕ್ ಗೋ ಬ್ಯಾಕ್ ಅಮಿತ್ ಶಾ, ಗೋ ಬ್ಯಾಕ್ ನಿರ್ಮಲಾ ಸೀತಾರಾಮನ್ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಇಲ್ಲಿಯವರೆಗೆ ನಮ್ಮ ರೈತರಿಗೆ 650 ಕೋಟಿ ರೂಪಾಯಿಗಳನ್ನು ವಿತರಿಸಿದ್ದೇವೆ, ಕರ್ನಾಟಕಕ್ಕೆ ಪರಿಹಾರ ನೀಡದಿರಲು ನಿರ್ಮಲಾ ಸೀತಾರಾಮನ್ ಮತ್ತು ನರೇಂದ್ರ ಮೋದಿ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದರು.

Leave a Reply

Your email address will not be published. Required fields are marked *

error: Content is protected !!