ಉಡುಪಿ: ಜಿಲ್ಲಾ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮನವಿ ಸಲ್ಲಿಕೆ
ಉಡುಪಿ: ಬೆಂಗಳೂರಿನ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕರೆಯಂತೆ ಉಡುಪಿ ಜಿಲ್ಲೆಯ ಗುತ್ತಿಗೆದಾರರು ಪ್ರತಿಭಟನೆ ನಡೆಸಿ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ನೀಡಿದರು.
ರಾಜ್ಯದ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳು ಸ್ಥಳೀಯ ಗುತ್ತಿಗೆದಾರರಿಗೆ 1₹ ಲಕ್ಷದಿಂದ ₹5 ಲಕ್ಷದವರೆಗೆ ವಿದ್ಯುತ್ ಕಾಮಗಾರಿಗಳ ತುಂಡು ಗುತ್ತಿಗೆಯಾಗಿ ನೀಡುವಂತೆ ಮುಖ್ಯಮಂತ್ರಿ ಅವರ ಕಚೇರಿಯಿಂದ ಆದೇಶವಿದ್ದರೂ ವಿದ್ಯುತ್ ಸರಬರಾಜು ಕಂಪನಿಗಳಿಂದ ಕಾಮಗಾರಿಗಳು ದೊರೆಯುತ್ತಿಲ್ಲ. ಈ ಬಗ್ಗೆ ಜಿಲ್ಲಾ ಸಮಿತಿ ಅಧ್ಯಕ್ಷ ನಾಗರಾಜ ಎಂ.ರಾವ್ ಉಪಸ್ಥಿತಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಬೊಮ್ಮಾಯಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರಿಗೂ ಮನವಿ ನೀಡಲಾಯಿತು. ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಪ್ರಭಾಕರ್ ನೇರಂಬಳ್ಳಿ, ಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ ಶೆಣೈ, ಜಿಲ್ಲಾ ಕಾರ್ಯದರ್ಶಿ ಆಲ್ಫೋನ್ಸ್ ಕೆ. ಆಳ್ವ, ಜಿಲ್ಲಾ ಜತೆ ಕಾರ್ಯದರ್ಶಿ ರಮಾನಂದ ಪೂಜಾರಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಉದಯಕುಮಾರ್ ಬ್ರಹ್ಮಾವರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ವಸಂತ, ಗಣೇಶ್ ಪೂಜಾರಿ, ಗಣೇಶ್ ಪ್ರಸಾದ್ ಶೆಟ್ಟಿ, ದಿನೇಶ್ ಕಾರ್ಕಳ ಇದ್ದರು.