ಉಡುಪಿ: ಮೃತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಪರಾರಿಯಾದ ಯುವಕ!
ಉಡುಪಿ: (ಉಡುಪಿ ಟೈಮ್ಸ್ ವರದಿ)ಸಂಶಯಾಸ್ಪದವಾಗಿ ಮೃತಪಟ್ಟ ಯುವತಿಯೊಬ್ಬಳನ್ನು ಯುವಕನೊರ್ವ ಆಸ್ಪತ್ರೆಗೆ ದಾಖಲಿಸಿ ಪರಾರಿಯಾದ ಘಟನೆ ಶನಿವಾರ ನಡೆದಿದೆ. ಮೃತ ಯುವತಿಯನ್ನು ಕುಕ್ಕೆಹಳ್ಳಿ ನಿವಾಸಿ ರಕ್ಷಿತಾ ನಾಯಕ್(19) ಎಂದು ತಿಳಿದು ಬಂದಿದೆ.
ಶನಿವಾರ ರಾತ್ರಿ ಅಂಬಾಗಿಲಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಬೈಂದೂರಿನ ಜಡ್ಕಲ್ ನಿವಾಸಿ ಪ್ರಶಾಂತ್ ಕುಂದರ್ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಪರಾರಿಯಾದತ ಎನ್ನಲಾಗಿದೆ.
ಶನಿವಾರ ಸಂಜೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಕ್ಷಿತಾಳನ್ನು ಆಟೋ ರಿಕ್ಷಾದಲ್ಲಿ ಉಡುಪಿಯ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿದ್ದ ಪ್ರಶಾಂತ್ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ವೈದ್ಯರು ಯುವತಿಯನ್ನು ಪರೀಕ್ಷಿಸಿ ಮೃತಪಟ್ಟಿದ್ದಾಳೆ ಎಂದು ಹೇಳಿದಾಕ್ಷಾಣ, ಪ್ರಶಾಂತ್ ಫೋನಿನಲ್ಲಿ ಮಾತನಾಡುತ್ತಾ ಆಸ್ಪತ್ರೆಯಿಂದ ಕಾಲ್ಕಿತ್ತ ಎಂದು ತಿಳಿದು ಬಂದಿದೆ.
ಪ್ರಶಾಂತ್ ಯುವತಿಯ ಮನೆಯವರಿಗೆ ಫೋನ್ ಮಾಡಿ ರಕ್ಷಿತಾ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾನೆ.
ಆಸ್ಪತ್ರೆಯವರಿಂದ ಉಡುಪಿ ನಗರ ಠಾಣೆಗೆ ಮಾಹಿತಿ: ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಮಧುಸೂದನ್ ನಾಯಕ್ ಅವರು ಮೃತ ಯುವವತಿಯ ದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ನಗರ ಪೊಲೀಸರು ಮೃತ ದೇಹ ನೋಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆಂದು ಹೇಳುತ್ತಿದ್ದು, ಮುಂದಿನ ತನಿಖೆಗಾಗಿ ಯುವಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ನಂತರವಷ್ಟೇ ಸ್ಪಷ್ಟ ಮಾಹಿತಿ ಸಿಗಲಿದೆ.