ಇಲ್ಲಿ ಕಾಂಗ್ರೆಸ್‌ ಸಾಯುತ್ತಿದೆ, ಅಲ್ಲಿ ಪಾಕಿಸ್ತಾನ ರಾಹುಲ್ ಪ್ರಧಾನಿಯಾಗಲಿ ಎಂದು ಅಳುತ್ತಾ ಪ್ರಾರ್ಥಿಸುತ್ತಿದೆ – ಮೋದಿ

ಗುಜರಾತ್: ಇಲ್ಲಿ ಕಾಂಗ್ರೆಸ್‌ ಸಾಯುತ್ತಿದೆ. ಭಾರತದಲ್ಲಿ 2014ಕ್ಕಿಂತ ಹಿಂದೆ ಇದ್ದಂತಹ ದುರ್ಬಲ ಸರ್ಕಾರವೇ ಇರಲೆಂದು ಪಾಕಿಸ್ತಾನ ಅಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗುಜರಾತ್ ನ ಆನಂದ್ ನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು ಜತೆಗೆ ಕಾಂಗ್ರೆಸ್​ ಹಾಗೂ ಪಾಕಿಸ್ತಾನದ ಸಹಭಾಗಿತ್ವವನ್ನು ಬಹಿರಂಗಪಡಿಸಿದ್ದಾರೆ.

ರಾಹುಲ್‌ ಗಾಂಧಿ ಭಾಷಣವನ್ನು ಪಾಕಿಸ್ತಾನದ ಇಮ್ರಾನ್ ಖಾನ್ ಸಂಪುಟದಲ್ಲಿ ಮಂತ್ರಿಯಾಗಿದ್ದ ಮಾಜಿ ಸಚಿವ ಫವಾದ್‌ ಹುಸೇನ್‌ ಮೆಚ್ಚಿಕೊಂಡಿದ್ದನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ ಪಾಕಿಸ್ತಾನ ಹಾಗೂ ಕಾಂಗ್ರೆಸ್‌ ಮಧ್ಯೆ ಎಷ್ಟೊಂದು ಸ್ನೇಹ ಸಂಬಂಧ ಇದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ತಿರುಗೇಟು ಕೊಟ್ಟರು. ಕಾಂಗ್ರೆಸ್‌ ಇಲ್ಲಿ ದುರ್ಬಲಗೊಳ್ಳುತ್ತಿದ್ದರೆ ಅಲ್ಲಿ ಪಾಕಿಸ್ತಾನ ರಾಹುಲ್‌ ಗಾಂಧಿ ಪ್ರಧಾನಿ ಆಗಬೇಕೆಂದು ಅಳುತ್ತಾ ಪ್ರಾರ್ಥಿಸುತ್ತಿದೆ. ಹೇಗಾದರೂ ಸರಿ ಯುವರಾಜನೇ(ರಾಹುಲ್‌ ಗಾಂಧಿ) ಭಾರತದ ಪ್ರಧಾನಿ ಆದರೆ ಸಾಕೆಂದು ಪಾಕಿಸ್ತಾನ ಬಯಸುತ್ತಿದೆ. ಕಾಂಗ್ರೆಸ್‌ ಮತ್ತು ಪಾಕಿಸ್ತಾನದ ನಡುವಿನ ಸ್ನೇಹ ಸಂಬಂಧ ಈಗಾಗಲೇ ಬಯಲಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!