ಉಡುಪಿ ಗಾಂಧಿ‌ ಆಸ್ಪತ್ರೆ: ಮೇ 5ರಂದು ಬೃಹತ್ ರಕ್ತದಾನ‌ ಶಿಬಿರ

ಉಡುಪಿ: ನಗರದ ಸಿಟಿ ಬಸ್ ನಿಲ್ದಾಣ ಬಳಿ ಇರುವ “ಗಾಂಧಿ ಆಸ್ಪತ್ರೆ” 30ನೇ ವರ್ಷಕ್ಕೆ ಪಾದಾರ್ಪಣೆಗೊಳ್ಳುತ್ತಿರುವ ಸಂದರ್ಭದಲ್ಲಿ ಪಂಚಮಿ ಟ್ರಸ್ಟ್ ಮತ್ತು ಪಂಚಲಹರಿ ಫೌಂಡೇಶನ್ ಆಶ್ರಯದಲ್ಲಿ ಮೇ 5ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12.30ರ ವರೆಗೆ ಆಸ್ಪತ್ರೆಯಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ಶಿಬಿರವನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ, ಜಿಲ್ಲಾ ಸರ್ಜನ್ ಡಾ.ಎಚ್.ಅಶೋಕ್, ಐ.ಎಂ.ಎ ಉಡುಪಿ ಕರಾವಳಿ ಶಾಖೆ ಅಧ್ಯಕ್ಷೆ ಡಾ. ರಾಜಲಕ್ಷ್ಮಿ ಹಾಗೂ ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಯುವ ವಿಜ್ಞಾನಿ ಡಾ.ಎನ್. ರಮೇಶ್ ಹೊಳ್ಳ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಡಾ. ಗಣಪತಿ ಭಟ್, ರಾಷ್ಟ್ರ ಮಟ್ಟದ ಮಹಿಳಾ ದಿವ್ಯಾಂಗರ ಕ್ರಿಕೆಟ್ ಪಂದ್ಯಾಟದಲ್ಲಿ ಜಯಭೇರಿ ಬಾರಿಸಿದ ಕರ್ನಾಟಕ ತಂಡದ ಸವ್ಯಸಾಚಿ ಆಟಗಾರ್ತಿ ಶ್ರೀಲತಾ, ಬಾಲ ಪ್ರತಿಭೆಗಳಾದ ಮನ್ಯು ವಿ. ತಂತ್ರಿ ಹಾಗೂ ಮಧ್ವ ವಿ. ತಂತ್ರಿ ಅವರನ್ನು ಸನ್ಮಾನಿಸಲಾಗುವುದು.

ಸಾಮಾಜಿಕ ಕಳಕಳಿಯಿಂದ ಕಳೆದ 20 ವರ್ಷದಿಂದ ರಕ್ತದಾನ ಶಿಬಿರ ನಡೆಸಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಸಮಾಜ ಸೇವೆಯಲ್ಲಿ ಗಾಂಧಿ ಆಸ್ಪತ್ರೆಯೊಂದಿಗೆ ಕೈಜೋಡಿಸಬೇಕಾಗಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಹರಿಶ್ಚಂದ್ರ ಮತ್ತು ವೈದ್ಯಕೀಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!