ಮಂಗಳೂರು: ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ

ಬಂಟ್ವಾಳ: ಬಿಸಿರೋಡಿನ ಹೆಸರಾಂತ ಹೋಟೆಲ್ ವೊಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಇಂದು ಬೆಳಕಿಗೆ ಬಂದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30)  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಭಾನುವಾರ ಬಿಸಿರೋಡಿನ ಬಸ್ ನಿಲ್ದಾಣದ ಬಳಿಯಿರುವ ಹೋಟೆಲ್‌ವೊಂದರಲ್ಲಿ ರೂಮ್ ಮಾಡಿದ್ದ ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ಬಾಗಿಲು ತೆರೆಯದೇ ಇದ್ದು, ಹೋಟೆಲ್ ಸಿಬ್ಬಂದಿಗಳು ಕರೆದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಈತನ ಮೃತದೇಹದ ಪತ್ತೆಯಾಗಿದೆ.

ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ.

ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ ಸರಿಯಾದ ಸಮಯಕ್ಕೆ  ಹಿಂದಿರುಗಿಸಲಾಗಿಲ್ಲ ಎಂದು ಕೊರಗುತ್ತಿದ್ದ ಎಂದು ಆತನ ಸ್ನೇಹಿತರು ತಿಳಿಸಿದ್ದಾರೆ.

ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ಕಾರಣವನ್ನು ಎದುರಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಹಾಗಾಗಿ ಮಾನಸಿಕವಾಗಿ ನೊಂದ ಕಾರಣ ಈತ ಆತ್ಮಹತ್ಯೆ ‌ಮಾಡಿಕೊಳ್ಳಲು ಕಾರಣವಾಗಿರಬಹುದು ‌ಎಂದು ಪೊಲೀಸರು ಶಂಕಿಸಿದ್ದು,ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!