ಹಿರಿಯ ಜಾನಪದ ವಿದ್ವಾಂಸ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಇನ್ನಿಲ್ಲ
ಪುತ್ತೂರು:(ಉಡುಪಿ ಟೈಮ್ಸ್ ವರದಿ) ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಿವೃತ್ತ ಉಪನ್ಯಾಸಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಅವರು ಕಳೆದ ರಾತ್ರಿ ನಿಧನರಾದರು.
ಸುಳ್ಯ ತಾಲೂಕಿನ ಪೆರುವಾಜೆಯಲ್ಲಿರುವ ತನ್ನ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಮಂಗಳವಾರ ಸಂಜೆ ವೇಳೆಗೆ ಏರುಪೇರು ಕಂಡು ಬಂದಿತ್ತು. ರಾತ್ರಿ ಅವರನ್ನು ನಗರದ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊ. ಆಗಿರುವ ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ.ಆರ್, ಬೆಳ್ಳಾರೆ ಡಾ.ಶಿವರಾಮ ಕಾರಂತ ಪ.ಪೂ.ಕಾಲೇಜಿನಲ್ಲಿ ಉಪನ್ಯಾಸಕಿ ಸುಪ್ರಿಯಾ ಪಿ.ಆರ್, ಸೊಸೆ, ಅಳಿಯಂದಿರು ಹಾಗು ಬಂಧುಬಳಗವನ್ನು ಅಗಲಿದ್ದಾರೆ.
ಡಾ. ಪಾಲ್ತಾಡಿಯವರ ಮೃತದೇಹವನ್ನು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಮೇ 8ರಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.