‘ಜನಾಂಗೀಯ ಹೇಳಿಕೆ’ ವಿವಾದದ- ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ

Oplus_131072

ನವದೆಹಲಿ: ಸ್ಯಾಮ್ ಪಿತ್ರೋಡಾ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಬುಧವಾರ ತಿಳಿಸಿದ್ದಾರೆ.

ಈ ಕುರಿತು ‘X’ ನಲ್ಲಿ ಪೋಸ್ಟ್ ಮಾಡಿರುವ ಜೈರಾಮ್ ರಮೇಶ್ ಅವರು, “ಶ್ರೀ ಸ್ಯಾಮ್ ಪಿತ್ರೋಡಾ ಅವರು ತಮ್ಮ ಸ್ವಂತ ಇಚ್ಛೆಯ ಮೇರೆಗೆ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರು ಅವರ ನಿರ್ಧಾರವನ್ನು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಸ್ಯಾಮ್ ಪಿತ್ರೋಡಾ ಅವರು ಸಂದರ್ಶನವೊಂದರಲ್ಲಿ, ಭಾರತದ ವೈವಿಧ್ಯತೆಯನ್ನು ವಿವರಿಸುವಾಗ, ಭಾರತದ ಪೂರ್ವದ ಜನರು ಚೀನಾದವರಂತೆ, ಪಶ್ಚಿಮದವರು ಅರಬ್ ನವರಂತೆ, ಉತ್ತರ ಭಾರತದ ಜನರು ಬಿಳಿಯರಂತೆ ಮತ್ತು ದಕ್ಷಿಣ ಭಾರತೀಯರು ಆಫ್ರಿಕದವರಂತೆ ಕಾಣುತ್ತಾರೆ. ಭಾರತದಂಥಾ ವೈವಿಧ್ಯಮಯ ದೇಶದಲ್ಲಿ ಮಾತ್ರ ಹೀಗೆ ಎಲ್ಲರನ್ನೂ ಒಟ್ಟಾಗಿ ಕಾಣಲು ಸಾಧ್ಯ ಎಂದು ಹೇಳಿದ್ದರು.

ಲೋಕಸಭಾ ಚುನಾವಣೆಯ ಸಮಯದಲ್ಲಿ ಸ್ಯಾಮ್ ಪಿತ್ರೋಡಾ ಅವರ ಈ ಜನಾಂಗೀಯ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಪಿತ್ರೋಡಾ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದರು ಮತ್ತು ಚರ್ಮದ ಬಣ್ಣದ ಆಧಾರದ ಮೇಲೆ ಅವಮಾನವನ್ನು ದೇಶವಾಸಿಗಳು ಸಹಿಸುವುದಿಲ್ಲ ಎಂದು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!