SSLC ವಿದ್ಯಾರ್ಥಿನಿ ಹತ್ಯೆ ಪ್ರಕರಣ: ಆರೋಪಿ ಪ್ರಕಾಶ್ ಬಂಧನ- ಬಾಲಕಿ ರುಂಡ ಪತ್ತೆ

Oplus_131072

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಬಳಿಯ ಕುಂಬಾರಗಡಿಗೆ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ.

ಎಸ್​ಎಸ್​ಎಲ್​ಸಿ ಫಲಿತಾಂಶ ಹೊರ ಬಿದ್ದ ದಿನವೇ ಬಾಲಕಿಯೊಂದಿಗೆ ನಿಗದಿಯಾಗಿದ್ದ ನಿಶ್ಚಿತಾರ್ಥ ಮುರಿದುಬಿದ್ದ ನಂತರ ಬಾಲಕಿಯ ಮನೆಗೆ ಹೋಗಿ ಪೋಷಕರ ಮೇಲೆ ಹಲ್ಲೆ ಮಾಡಿ ಬಾಲಕಿಯನ್ನು ಎಳೆದಾಡಿ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು.

ಈ ಹಿಂದೆ, ಆರೋಪಿ ಕೃತ್ಯ ಎಸಗಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ಬಾಲಕಿಯ ರುಂಡ ಪತ್ತೆ:

ಪ್ರಾಥಮಿಕ ತನಿಖೆಯ ನಂತರ ಆರೋಪಿಯು ಬಾಲಕಿಯ ಕತ್ತರಿಸಿದ ತಲೆಯನ್ನು ಇಟ್ಟುಕೊಂಡಿದ್ದ ಸ್ಥಳಕ್ಕೆ ಪೊಲೀಸರನ್ನು ಕರೆದೊಯ್ದನು.

ಬಾಲಕಿಯನ್ನು ಕೊಂದ ನಂತರ ಘಟನಾ ಸ್ಥಳದಿಂದ 300 ಮೀಟರ್ ದೂರದಲ್ಲಿರುವ ಮಾವಿನ ಮರದ ಕೊಂಬೆಯ ಮೇಲೆ ಮೀನಾಳ ತಲೆಯನ್ನು ಇಟ್ಟಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಪೂರ್ತಿ ಶೋಧ ಕಾರ್ಯಾಚರಣೆ ನಡೆಸಿದ ಶ್ವಾನದಳ ಹಾಗೂ ಪೊಲೀಸ್ ಸಿಬ್ಬಂದಿಗೆ ತುಂಡರಿಸಿದ ತಲೆ ಪತ್ತೆಯಾಗಿರಲಿಲ್ಲ.

ಯಾವುದೇ ದೊಡ್ಡ ಹಾನಿಯಾಗದ ಸ್ಥಿತಿಯಲ್ಲಿ ತುಂಡರಿಸಿದ ತಲೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯೊಂದಿಗಿನ ನಿಶ್ಚಿತಾರ್ಥವನ್ನು ರದ್ದುಗೊಳಿಸಿದ ನಂತರ ನಾನು ಕಂಗಾಲಾಗಿದ್ದೆ. ಕಾಡಿನಲ್ಲಿ ಬಾಲಕಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದು ನಂತರ ಕೃತ್ಯ ಎಸಗಿರುವುದಾಗಿ ಆರೋಪಿ ಪೊಲೀಸರ ಬಳಿ ಆರೋಪಿ ಪ್ರಕಾಶ್ ತಪ್ಪೊಪ್ಪಿಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!