ಟೇಕಾಫ್‌ಗೂ ಮುನ್ನ ಟ್ರಕ್‌ಗೆ ಢಿಕ್ಕಿ ಹೊಡೆದ ಏರ್ ಇಂಡಿಯಾ ವಿಮಾನ- 180 ಪ್ರಯಾಣಿಕರು ಸುರಕ್ಷಿತ
ಪುಣೆ: ದಿಲ್ಲಿಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನವು ರನ್ ವೇಯತ್ತ ಚಲಿಸುವಾಗ ಟ್ರಕ್ ಒಂದಕ್ಕೆ ಢಿಕ್ಕಿ ಹೊಡೆದಿರುವ ಘಟನೆ ಗುರುವಾರ ಪುಣೆ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ರಾಷ್ಟ್ರೀಯ ಸುದ್ದಿ ಮಾಧ್ಯಮ ವರದಿ ಮಾಡಿದೆ.
ಈ ಘಟನೆಯ ಸಂದರ್ಭದಲ್ಲಿ ವಿಮಾನದಲ್ಲಿ ಸುಮಾರು 180 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ. ಆದರೆ, ಈ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.
ಈ ಕುರಿತು ಪ್ರತಿಕ್ರಿಯಿಸಿರುವ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು, ಈ ಘಟನೆಯಲ್ಲಿ ವಿಮಾನದ ಮೂತಿಗೆ ಹಾಗೂ ಭೂಸ್ಪರ್ಶ ಮಾಡುವ ಗೇರ್ ಬಳಿ ಇರುವ ಟೈರ್ ಗೆ ಹಾನಿಯಾಗಿದೆ. ಡಿಕ್ಕಿಯ ಹೊರತಾಗಿಯೂ ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿಗಳೆಲ್ಲ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ” ಎಂದು ತಿಳಿಸಿದ್ದಾರೆ.