ರಾಜ್ಯ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಜೂನ್‌ 13ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ

ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಲ್ಲದೆ, ಮತದಾನದ ದಿನವಾದ ಜೂನ್‌ 13ರಂದೇ ಮತ ಎಣಿಕೆ ನಡೆಯಲಿದೆ ಎಂದು ಆಯೋಗದ ಪ್ರಕಟನೆ ತಿಳಿಸಿದೆ.

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್‌ 17ಕ್ಕೆ ಕೊನೆಗೊಳ್ಳಲಿದ್ದು, ಅರವಿಂದ ಕುಮಾರ್ ಅರಳಿ, ಎನ್.ಎಸ್.ಬೋಸರಾಜ್,ಕೆ.ಗೋವಿಂದರಾಜ್, ಡಾ. ತೇಜಶ್ವಿನಿ ಗೌಡ, ಮುನಿರಾಜುಗೌಡ, ಕೆ.ಪಿ.ನಂಜುಂಡಿ, ರಘುನಾಥ್ ರಾವ್ ಮಲ್ಕಾಪುರೆ, ಎನ್.ರವಿಕುಮಾರ್, ಎಸ್.ರುದ್ರೇಗೌಡ, ಎಚ್. ಹರೀಶ್ ಕುಮಾರ್, ಬಿ.ಎಂ. ಫಾರೂಕ್ ಅವರ ಅವಧಿ ಕೊನೆಗೊಳ್ಳಲಿದೆ.

Leave a Reply

Your email address will not be published. Required fields are marked *

error: Content is protected !!