ಮದ್ಯಪ್ರಿಯರಿಗೆ ಮತ್ತೆ ಶಾಕಿoಗ್ ನ್ಯೂಸ್… ಕೋವಿಡ್ ಬಳಿಕ ಸತತ ನಾಲ್ಕು ದಿನ ಬಾರ್ ಬಂದ್!
ಉಡುಪಿ, ಮೇ 21: ಕೋವಿಡ್ ಬಳಿಕ ರಾಜ್ಯದಲ್ಲಿ ಮತ್ತೆ ನಿರಂತರ ಮದ್ಯ ಮಾರಾಟಕ್ಕೆ ಬ್ರೆಕ್ ಬಿಳಲಿದೆ.
ರಾಜ್ಯದಲ್ಲಿ ಒಂದೆಡೆ ವಿಧಾನ ಪರಿಷತ್ ಚುನಾವಣೆ ಆದರೆ, ಇನ್ನೊಂದೆಡೆ ಲೋಕಸಭಾ ಚುನಾವಣಾ ಫಲಿತಾಂಶ ಬಿಸಿಯ ನಡುವೆ ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಚುನಾವಣಾ ಆಯೋಗ ನೀಡಿದೆ.
ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಾದ್ಯಂತ ಜೂನ್ 1 ರಂದು ಸಂಜೆ 5 ಗಂಟೆಯಿಂದ ಜೂನ್ 3 ರ ಮಧ್ಯರಾತ್ರಿ 12 ರ ವರೆಗೆ ಎಲ್ಲಾ ರೀತಿಯಇರುತ್ತದೆ. ಡಿ, ಮದ್ಯಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಲರಿ, ಸ್ಟಾರ್ ಹೋಟೆಲ್‌ಗಳಲ್ಲಿ, ಶೇಂದಿ ಅಂಗಡಿ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಇನ್ನೊಂದೆಡೆ ದೇಶಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟ ಜೂನ್ 4 ರಂದು ನಡೆಯಲಿದ್ದು, ಈ ಸಂಬಂಧ ಜೂನ್ 3ರ ಸಂಜೆ 5 ರಿಂದ ಜೂನ್ 4 ರಾತ್ರಿ 12 ವರೆಗೆ ಮದ್ಯ ಮಾರಾಟ ನಿಷೇಧ ಹೇರಿ ಆದೇಶ ಹೊರ ಬಿಳಲಿದೆ.
ಇದರಿಂದಾಗಿ ರಾಜ್ಯದಲ್ಲಿ ನಿರಂತರ ನಾಲ್ಕು ದಿನ ಮದ್ಯ ಮಾರಾಟ ನಿಷೇಧ ಇರುತ್ತದೆ. ಕೋವಿಡ್ ಬಳಿಕ ಇದೇ ಮೊದಲ ಬಾರಿ ನಾಲ್ಕು ದಿನ ಮದ್ಯ ಮರಾಟ ನಿಷೇಧವಾಗಲಿದ್ದು, ಮದ್ಯ ಪ್ರಿಯರು ತಮ್ಮಿಷ್ಟದ ಬ್ರಾಂಡ್‌ನ ಮದ್ಯ ಸಂಗ್ರಹ ಮಾಡಿಡುವ ಯೋಚನೆಯಲ್ಲಿದ್ದಾರೆ.