ಅಕ್ರಮ ಮರಳುಗಾರಿಕೆ: ಪ್ರತೀ ಜಮೀನಿಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಲು ಆದೇಶ
ಜಿಲ್ಲೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಿರುವ ಪ್ರಕರಣಗಳಲ್ಲಿ ಸಂಬ0ಧಪಟ್ಟವರ ವಿರುದ್ಧ ಕೇಸು ದಾಖಲಿಸಲು ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸೂಚಿಸಿದರು. ಪಟ್ಟಾ ಜಮೀನು ಸೇರಿದಂತೆ ಲಾಕ್‌ಡೌನ್ ಅವಧಿಯಲ್ಲಿ ಅಕ್ರಮ ಮರಳುಗಾರಿಕೆ ನಡೆದಿರುವ ಬಗ್ಗೆ ಉಪವಿಭಾಗಾಧಿಕಾರಿಗಳು, ಪ್ರತೀ ಜಮೀನಿಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಲು ಅವರು ನಿರ್ದೇಶಿಸಿದರು.
ಜಿಲ್ಲಾಧಿಕಾರಿಗಳು ಈ ಬಗ್ಗೆ ವಿವರ ನೀಡಿ, ಈಗಾಗಲೇ ಇಂತಹ ಪ್ರಕರಣಗಳ ವಿರುದ್ಧ ಕೇಸು ದಾಖಲಿಸಲಾಗಿದೆ. 5 ವಾಹನಗಳನ್ನು ಜಫ್ತಿ ಮಾಡಲಾಗಿದೆ. ಅಲ್ಲದೇ, ಸಂಬAಧಪಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಹಾಗೂ ಸಂಬ0ಧಿತ ಲಕ್ಷಣಗಳಿರುವ ರೋಗಿಗಳ ಚಿಕಿತ್ಸೆಗಾಗಿ ಇನ್ನೂ ಹೆಚ್ಚುವರಿಯಾಗಿ ಆಸ್ಪತ್ರೆಗಳ ಹಾಸಿಗೆಗಳನ್ನು ವಿಸ್ತರಿಸಲಾಗುವುದು. ಇದಕ್ಕಾಗಿ ಅಗತ್ಯ ವೈದ್ಯರು, ಸಿಬ್ಬಂದಿಗಳ ನೇಮಕಾತಿಗೆ ಅನುಮೋದನೆ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಕೈಗಾರಿಕೆ, , ವಾರ್ತಾ ಇಲಾಖೆಯ ಪ್ರದಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ತಿಳಿಸಿದ್ದಾರೆ.
ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈಗಾಗಲೇ ರಾಜ್ಯ ಸರಕಾರ ಆಸ್ಪತ್ರೆಗಳಲ್ಲಿ 2500 ಹೆಚ್ಚುವರಿ ಹಾಸಿಗೆಗಳನ್ನು ಸೃಷ್ಟಿಸಲು ಸೂಚಿಸಿದೆ. ಈ ನಿಟ್ಟಿನಲ್ಲಿ ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದ್ದು, ಜಿಲ್ಲಾಧಿಕಾರಿಗಳ ಪ್ರಸ್ತಾವನೆಗೆ ಸರಕಾರದ ಅನುಮತಿ ನೀಡಲಾಗುವುದು ಎಂದು ಅವರು ತಿಳಿಸಿದರು. ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸಲಾಗುವ ಉಪಕರಣಗಳ ಕಾರ್ಯಕ್ಷಮತೆ ಹಾಗೂ ಸಿಬ್ಬಂದಿಗಳ ತರಭೇತಿ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ವೆಂಟಿಲೇಟರ್ ಸೌಲಭ್ಯ ಒದಗಿಸುವುದರೊಂದಿಗೆ, ಹೆಚ್ಚುವರಿಯಾಗಿ ಖಾಸಗೀ ಆಸ್ಪತ್ರೆಗಳನ್ನು ಇದಕ್ಕಾಗಿ ಗುರುತಿಸಬೇಕು ಎಂದು ಉಸ್ತುವಾರಿ
ಕಾರ್ಯದರ್ಶಿಗಳು ಸೂಚಿಸಿದರು.
ಹೊರರಾಜ್ಯದಿಂದ ಬಂದವರ ಮಾಹಿತಿ ಆಯಾ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯತ್‌ಗಳಲ್ಲಿ ಇರಬೇಕು. ಅವರ ಕ್ವಾರೆಂಟೈನ್ ಅವಧಿಯ ಮೇಲೆ ನಿಗಾ ಇಡಬೇಕು ಎಂದು ಅವರು ತಿಳಿಸಿದರು. ಉಡುಪಿ ಜಿಲ್ಲೆಯ ಕೋವಿಡ್ ಪ್ರಯೋಗಾಲಯದ ಮೂಲಸೌಕರ್ಯ ಕಾಮಗಾರಿ ಅಂತಿಮ ಹಂತದಲ್ಲಿದ್ದು, 2-3 ದಿನಗಳೊಳಗೆ ಪೂರ್ಣಗೊಳ್ಳಲಿದೆ. ಬಳಿಕ ಪ್ರಯೋಗಾಲಯದಲ್ಲಿ ಅಗತ್ಯ ಉಪಕರಣಗಳ ಅಳವಡಿಕೆಯಾಗಿ, ಪ್ರಯೋಗಾಲಯದಲ್ಲಿ ಗಂಟಲ ದ್ರವ ಪರೀಕ್ಷೆ ಉಡುಪಿಯಲ್ಲಿಯೇ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಉದ್ಯಮಿಗಳಿಗೆ ನೆರವು: ಬ್ಯಾಂಕರ್‌ಗಳ ಜತೆ ಸಭೆ ಕೋವಿಡ್ ಹಿನ್ನೆಲೆಯಲ್ಲಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆ, ಉದ್ಯಮಿಗಳಿಗೆ ಕೇಂದ್ರ ಸರಕಾರ ಘೋಷಿಸಿರುವ ಹಣಕಾಸು ನೆರವು ಯೋಜನೆ ಜಾರಿಗೆ ಜಿಲ್ಲೆಯಲ್ಲಿ ಕೆಲವು ಖಾಸಗೀ ಬ್ಯಾಂಕುಗಳು ಸ್ಪಂದಿಸುತ್ತಿಲ್ಲ ಎಂಬ ಬಗ್ಗೆ
ದೂರುಗಳು ಬಂದಿದ್ದು, ಈ ಬಗ್ಗೆ ಜಿಲ್ಲೆಯ ಬ್ಯಾಂಕುಗಳ ಜತೆ ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಈ ಬಗ್ಗೆ ಪ್ರತೀ ವಾರ ಪರಿಶೀಲನೆ ನಡೆಸಲು ಅವರು ತಿಳಿಸಿದರು.
ಕಳೆದ ವರ್ಷ ಪ್ರಾಕೃತಿಕ ವಿಕೋಪದಿಂದ ಭಾಗಶ: ಹಾನಿಗೊಳಗಾದ ಮನೆಗಳನ್ನು ಪುನರ್ ನಿರ್ಮಾಣ ಮಾಡಲು ಈಗಾಗಲೇ ಅನುದಾನ ಬಿಡುಗಡೆ ವಿಳಂಭದಿAದ ಕೆಲವೆಡೆ ಮನೆ ನಿರ್ಮಾಣ ಇನ್ನೂ ಪೂರ್ಣಗೊಳ್ಳದಿರುವ ಮನೆಗಳಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಲು ಅವರು ಸೂಚಿಸಿದರು. ಜಿಲ್ಲೆಯಲ್ಲಿ ಕೃಷಿ ಭಿತ್ತೆನೆ ಬೀಜಕ್ಕೆ ಹೆಚ್ಚು ಬೇಡಿಕೆ ಬರುತ್ತಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಚ್ಚು ಜನಸಂದಣಿ ಕಂಡುಬAದಿದೆ. ಜಿಲ್ಲೆಯ ಕೆಲವೆಡೆ ಈಗಾಗಲೇ ಭಿತ್ತೆನೆ ಚಟುವಟಿಕೆ ಆರಂಭಗೊAಡಿದೆ ಎಂದು ಕೃಷಿ ಜಂಟೀ ನಿರ್ದೇಶಕರು ಸಭೆಗೆ ತಿಳಿಸಿದರು. ರಾಜ್ಯ ಸರಕಾರವು ಹೂ ಬೆಳೆಗಾರರಿಗೆ ಪರಿಹಾರ ನೀಡುವ ಯೋಜನೆಯಲ್ಲಿ ಜಿಲ್ಲೆಯಲ್ಲಿ 4333 ರೈತರು ಅರ್ಜಿ ಸಲ್ಲಿಸಿದ್ದಾರೆ. ಗರಿಷ್ಠ 2.5 ಎಕರೆಗೆ ರೂ. 25000 ಪರಿಹಾರ ದೊರಕಲಿದೆ. ಇದರೊಂದಿಗೆ ತರಕಾರಿ, ಹಣ್ಣು ಬೆಳೆಗಾರರಿಗೆ ಪರಿಹಾರ ನೀಡಲು ಹೊಸದಾಗಿ ಮಾರ್ಗದರ್ಶಿ ಬಂದಿದ್ದು, ಜಿಲ್ಲೆಯಲ್ಲಿ ಕಲ್ಲಂಗಡಿ ಹಾಗೂ ಅನಾನಸು ಬೆಳೆಗಾರರಿಗೆ ಪರಿಹಾರ ದೊರೆಯಲಿದೆ ಎಂದು ತೋಟಗಾರಿಕಾ ಉಪನಿರ್ದೇಶಕರು ಸಭೆಗೆ ತಿಳಿಸಿದರು.
If the matter was placed before PMs Office, Mr. Modi will make sure of stringent action even if the culprits were from his own Party.
Sand stealing gang is active in villages during the night time. Sevier action should be taken. Regarding the Covid 19, it is spreading every where day by day. Wearing of Mask or face cover should be strictly practiced. Some mischievous people are not wearing mask or face cover while walking in the roadside and going out in the vehicles.