ಮೂರೂರು ವಿಷ್ಣು ಭಟ್ಟ – ಚಿಟ್ಟಾಣಿ ರಾಮಚಂದ್ರ, ಅಜಿತ್ ಅಂಬಲಪಾಡಿ – ಟಿ.ವಿ.ರಾವ್ ಪ್ರಶಸ್ತಿ ಪ್ರದಾನ
ಉಡುಪಿ: ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಕಳೆದ ಏಳು ವರ್ಷಗಳಿಂದ ನೀಡುತ್ತಾ ಬಂದ ಎರಡು ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮ ನ. 7 ರಂದು ಸಂಜೆ 5.15 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.
ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿದ್ದಾರೆ. ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಸ್ತ್ರೀವೇಷಧಾರಿ ಮೂರೂರು ವಿಷ್ಣು ಭಟ್ಟರಿಗೂ, ಅಭಿಮಾನಿ ಬಳಗದ ಗೌರವಾಧ್ಯಕ್ಷರಾಗಿದ್ದ ಟಿ. ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಹಿಮ್ಮೇಳ ವಾದಕ, ವೇಷಧಾರಿ ಅಜಿತ್ ಕುಮಾರ್ ಅಂಬಲಪಾಡಿ ಇವರಿಗೂ ಪ್ರದಾನ ಮಾಡಲಾಗುವುದೆಂದು ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮತ್ತು ಕಾರ್ಯದರ್ಶಿ ಎಂ. ಗೋಪಿಕೃಷ್ಣ ರಾವ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.