ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ?- ಸಚಿವ ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ?

Oplus_131072

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಪತನಕ್ಕೆ ಕ್ಷಣಗಣನೆ ಶುರುವಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಚಾರದಲ್ಲಿ ಸರ್ಕಾರಕ್ಕೆ ಮುಖಭಂಗವಾಗಬಾರ ದೆಂದು ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೇ ಸೂಚನೆ ನೀಡಿದ್ದಾರೆ. ತನಿಖೆ ಬಳಿಕ ಮತ್ತೆ ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಹಾಗೂ ಈ ಪ್ರಕರಣವನ್ನು ಸಿಬಿಐಗೆ ನೀಡುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ವಿಧಾನ ಪರಿಷತ್‌ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಧಿಕಾರಿಯ ಆತ್ಮಹತ್ಯೆ ಹಾಗೂ ಸಂಭವನೀಯ ಪರಿಣಾಮಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸರ್ಕಾರಕ್ಕೆ ಮುಖಭಂಗವಾಬಾರದು ಹೀಗಾಗಿ ಬಿ.ನಾಗೇಂದ್ರ ರಾಜಿನಾಮೆ ನೀಡುವುದು ಒಳಿತು. ತನಿಖೆ ಪೂರ್ಣವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ಸಭೆಯಲ್ಲಿ ತೀರ್ಮಾನ ಕೈಗೊಂಡರು. ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ.ನಾಗೇಂದ್ರ ಅವರಿಗೆ, ಖುದ್ದು ತಾವೇ ಹೇಳಿಕೆ ನೀಡಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!