ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ
ನವದೆಹಲಿ: ಲೋಕಸಭೆ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿಯವರು ಇಂದು ರಾಜೀನಾಮೆ ನೀಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಪ್ರಧಾನಿ ಮೋದಿ 17ನೇ ಲೋಕಸಭೆಯನ್ನು ವಿಸರ್ಜಿಸುವಂತೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಲಾಯಿತು.
ಜೂನ್ 8 ರಂದು 3ನೇ ಅವಧಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸಾಧ್ಯತೆ
ಈ ಬಾರಿ ಬಿಜೆಪಿ ಸರಳ ಬಹುಮತ ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ NDA ಮಿತ್ರಪಕ್ಷಗಳಾದ ಟಿಡಿಪಿ ಮತ್ತು ಜೆಡಿಯು ಬೆಂಬಲ ಪಡೆದು ಸರ್ಕಾರ ರಚಿಸುವುದು ಅನಿವಾರ್ಯವಾಗಿದೆ. ಈಗಾಗಲೇ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ನರೇಂದ್ರ ಮೋದಿಯವರಿಗೆ ಅಧಿಕೃತವಾಗಿ ಬೆಂಬಲ ಘೋಷಿಸಿದ್ದು ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಜೂ 8 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ. ಈ ನಡುವೆ ಬುಧವಾರ ಸಂಜೆ ಎಲ್ಲಾ NDA ನಾಯಕರು ಇಂದು ಪ್ರಧಾನಿ ಮೋದಿ ನಿವಾಸದಲ್ಲಿ ಸಭೆ ಸೇರಲಿದ್ದಾರೆ.