ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ- ಸೋಲಿನ ಪರಾಮರ್ಶೆ ನಡೆಸುತ್ತೇವೆ: ಜಿ. ಪರಮೇಶ್ವರ್

Oplus_131072

ಉಡುಪಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅದನ್ನು ರಾಜಕೀಯ ಕಾರಣಕ್ಕಾಗಿ ನಾವು ಪ್ರಾರಂಭಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಲೋಕಸಭೆ ಚುನಾವಣೆ ಸೋಲಿನ ಪರಾಮರ್ಶೆ ನಡೆಸುತ್ತೇವೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದೇವೆ. ಸೋಲಿನ ಪರಾಮರ್ಶೆಗಾಗಿ ಸಮಿತಿಯನ್ನು ರಚಿಸುವ ನಿರ್ಧಾರ ತೆಗೆದುಕೊಂಡಿದ್ದೇವೆ. ಸಮಿತಿ ಮೂಲಕ ಸೋಲಿಗೆ ಕಾರಣ ಏನು ಎಂಬ ಬಗ್ಗೆ ವಿಚಾರ ಮಾಡುತ್ತೇವೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!