ಎನ್‌ಡಿಎ ಅಧಿಕಾರಕ್ಕೇರುತ್ತಿದ್ದಂತೆ ಮಿತ್ರ ಪಕ್ಷಗಳಲ್ಲಿ ಭುಗಿಲೆದ್ದ ಅಸಮಾಧಾನ
ಹೊಸದಿಲ್ಲಿ : ಎನ್‌ಡಿಎ ಅಧಿಕಾರಕ್ಕೇರುತ್ತಿದ್ದಂತೆ ಮಿತ್ರ ಪಕ್ಷಗಳಲ್ಲಿ ಸಚಿವ ಸ್ಥಾನ ಹಂಚಿಕೆ ಕುರಿತು ಅಸಮಾಧಾನ ಭುಗಿಲೆದ್ದಿದೆ.
ಎನ್‌ಸಿಪಿ ಅಜಿತ್ ಪವಾರ್ ಪಕ್ಷದ ಪ್ರಫುಲ್ ಪಟೇಲ್ ಗೆ ರಾಜ್ಯ ಸಚಿವ ಸ್ಥಾನ ನೀಡುವ ಬಗ್ಗೆ ಅವರು ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ANI ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, “ನಮ್ಮ ಪಕ್ಷಕ್ಕೆ ಸ್ವತಂತ್ರ ಹೊಣೆಯೊಂದಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಎಂದು ನಿನ್ನೆ ರಾತ್ರಿ ನಮಗೆ ತಿಳಿಸಿದ್ದಾರೆ. ನಾನು ಈ ಹಿಂದೆ ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವನಾಗಿದ್ದೆ. ಈ ನಡೆಯಿಂದ ನನಗೆ ಹಿನ್ನಡೆಯಾಗಿದೆ ಎಂದು ನಾನು ಈಗಾಗಲೇ ಬಿಜೆಪಿ ನಾಯಕರಿಗೆ ತಿಳಿಸಿದ್ದೇನೆ. ಅವರು ಇದಕ್ಕೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಕೆಲವು ದಿನ ಕಾಯಿರಿ ಎಂದು ಹೇಳಿದ್ದಾರೆ” ಎಂದು ಹೇಳಿದ್ದಾರೆ.