ಕುವೈತ್ ಅಗ್ನಿ ದುರಂತ: ಮೃತಪಟ್ಟವರಲ್ಲಿ 40 ಮಂದಿ ಭಾರತೀಯರು- ಪ್ರಧಾನಿ ಮೋದಿಯಿಂದ ಉನ್ನತ ಮಟ್ಟದ ಸಭೆ

Oplus_131072

ಹೊಸದಿಲ್ಲಿ: ಭಾರತೀಯ ಕಾಲಮಾನ ಬೆಳಗ್ಗೆ ಸುಮಾರು 9 ಗಂಟೆ(ಸ್ಥಳೀಯ ಕಾಲಮಾನ ಬೆಳಗ್ಗೆ 6 ಗಂಟೆ)ಗೆ ಕುವೈತ್ ನ ಮಂಗಾಫ್ ನಗರದಲ್ಲಿನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 49 ಮಂದಿ ಕಟ್ಟಡ ನಿರ್ಮಾಣ ಕಾರ್ಮಿಕರು ಮೃತಪಟ್ಟಿದ್ದು, ಈ ಪೈಕಿ 40 ಮಂದಿ ಭಾರತೀಯರು ಸೇರಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿರುವ 40 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಪರಿಹಾರ ಕಾರ್ಯಾಚರಣೆ ಕುರಿತು ಚರ್ಚಿಸಲು ಉನ್ನತ ಮಟ್ಟದ ಸಭೆ ಆಯೋಜಿಸಿದ್ದಾರೆ.

ಈ ನಡುವೆ, ಕುವೈತ್ ನಲ್ಲಿನ ಭಾರತೀಯ ರಾಯಭಾರಿ ಕಚೇರಿಯು ಈ ಅಗ್ನಿ ಅವಘಡದಲ್ಲಿ ಸಿಲುಕಿರುವ ಭಾರತೀಯ ಕಾರ್ಮಿಕರಿಗೆ ಸಹಾಯವಾಣಿಯನ್ನು ತೆರೆದಿದ್ದು, ಭಾರತೀಯ ರಾಜತಾಂತ್ರಿಕ ಕಚೇರಿಯು ಅವರಿಗೆ ನೆರವು ಒದಗಿಸಲಿದೆ.

+965-65505246 ತುರ್ತು ಸಹಾಯವಾಗಿ ಸಂಖ್ಯೆಯಾಗಿದೆ.

Leave a Reply

Your email address will not be published. Required fields are marked *

error: Content is protected !!