ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ದರ ಏರಿಕೆ!
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ನ ಮೇಲಿನ ಸೆಸ್ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ಸರಾಸರಿ 3 ರೂ ಮತ್ತು ಡೀಸೆಲ್ ಬೆಲೆಯಲ್ಲಿ 3.5 ರೂ ಹೆಚ್ಚಳ ಮಾಡಲಾಗಿದೆ. ತಕ್ಷಣದಿಂದಲೇ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.