ರಾಜ್ಯದಲ್ಲಿ ತೆರಿಗೆ ಭಯೋತ್ಪಾದನೆಯಿಂದ ಜನತೆಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್ ಸರ್ಕಾರ- ಪ್ರಮೋದ್ ಮಧ್ವರಾಜ್

ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಂದಾಗಿ ಬರಿದಾದ ಬೊಕ್ಕಸ ತುಂಬಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದಲ್ಲಿ ತೆರಿಗೆ ಭಯೋತ್ಪಾದನೆ ಮೂಲಕ ಜನತೆಗೆ ದ್ರೋಹ ಬಗೆಯುತ್ತಿದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯುತ್, ಬಸ್, ಭೂ ನೋಂದಣಿ, ಸ್ಟ್ಯಾಂಪ್ ಡ್ಯೂಟಿ, ಮದ್ಯ ದರ ಏರಿಕೆ ಬಳಿಕ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸುವ ಮೂಲಕ ಜನಸಾಮಾನ್ಯರಿಗೆ ಬರೆ ಎಳೆದಿದೆ.

ರಾಜ್ಯ ಸರ್ಕಾರ ತನ್ನ ದುರಾಡಳಿತವನ್ನು ಕೊನೆಗೊಳಿಸ ಬೇಕು. ಪೆಟ್ರೋಲ್, ಡೀಸೆಲ್ ದರ ಏರಿಕೆ ನಿರ್ಧಾರದಿಂದ ತಕ್ಷಣ ಹಿಂದೆ ಸರಿಯಬೇಕು ಎಂದು ಪ್ರಮೋದ್ ಮಧ್ವರಾಜ್ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!