ಇಂಧನ ದರ ಏರಿಕೆ: ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಬೇಕಲ್ವಾ?- ಎಂ.ಬಿ.ಪಾಟೀಲ್ ಸಮರ್ಥನೆ

ವಿಜಯಪುರ: ಆದಾಯ ಕಡಿಮೆ ಆಗ್ತಿದೆ. ಅಭಿವೃದ್ಧಿ, ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ ಅದಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿ ಸುದ್ದಿಗಾರರಿಗೆ ಈ ಕುರಿತು ಪ್ರತಿಕ್ರಿಯಿಸಿದ ಅವರು, ಬೇರೆ ರಾಜ್ಯಗಳನ್ನು ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಇದೆ. ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆಯಿದೆ ಯಾರ ಮೇಲೂ ಅನಾವಶ್ಯಕವಾಗಿ ಹೊರೆ ಹಾಕುತ್ತಿಲ್ಲ ಎಂದರು. ಮೋದಿಯವರು ಬಂದ ಮೇಲೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ ಅದನ್ನ ಯಾಕೆ ನೀವು ಕೇಳೋದಿಲ್ಲ. ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಾಗ 60 ರೂಪಾಯಿ ಪೆಟ್ರೋಲ್ ಇತ್ತು ಈಗ 105 ರೂಪಾಯಿ. ಉಳಿದ ರಾಜ್ಯಗಳನ್ನು ಹೋಲಿಕೆ ಮಾಡಿ ನೋಡಿ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ ಎಂದರು.

ನೆರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಪೆಟ್ರೋಲ್, ಡೀಸೆಲ್ ದರ ಕಡಿಮೆಯಿದೆ. ತಮಿಳುನಾಡು ಹಾಗೂ ಇತರ ರಾಜ್ಯಗಳಲ್ಲಿ 5 ರಿಂದ 10 ರೂಪಾಯಿ ಹೆಚ್ಚಿಗೆ ದರ ಇದೆ. ಇತರ ರಾಜ್ಯಗಳಿಗಿಂತ ಪೆಟ್ರೋಲ್ ಡೀಸೆಲ್ ದರ ಕಡಿಮೆ ಮಾಡಿ ಬೆಲೆ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆ ಆದಾಯ ಕಡಿಮೆಯಾಗುತ್ತಿದೆ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲ. ಹೀಗಾಗಿ ಅನವಶ್ಯಕವಾಗಿ ಹೆಚ್ಚಿಗೆ ಬೆಲೆ ಏರಿಕೆ ಮಾಡಲಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!