ರಾಜ್ಯ ಸಹಕಾರ ಸಪ್ತಾಹ ನ.15ಕ್ಕೆ-ಎಂ.ಎನ್.ರಾಜೇಂದ್ರ ಕುಮಾರ್
ಮಂಗಳೂರು: ಈ ವರ್ಷದ ‘ರಾಜ್ಯ ಮಟ್ಟದ ಸಹಕಾರ ಸಪ್ತಾಹ’ವು ನವೆಂಬರ್ 15ರಂದು ನಗರದ ಟಿ.ವಿ ರಮಣ ಪೈ ಕನ್ವೆನ್ಶನ್ ಹಾಲ್‍ನಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಗುರುವಾರ ಎಸ್‍ಸಿಡಿಸಿಸಿ ಬ್ಯಾಂಕಿನ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ‘ಪ್ರತಿ ವರ್ಷ ನವೆಂಬರ್ 14ರಿಂದ 20ರವರೆಗೆ ರಾಷ್ಟ್ರದಾದ್ಯಂತ ಅಖಿಲ ಭಾರತ ಸಹಕಾರ ಸಪ್ತಾಹ ನಡೆಯುತ್ತಿದೆ. ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸ ಇರಿಸಿಕೊಂಡಿದ್ದ ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಆ ಮೂಲಕ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಬಹುದೆಂಬ ಆಶಯ ಇರಿಸಿಕೊಂಡಿದ್ದರು’ ಎಂದು ವಿವರಿಸಿದರು. ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ ದೇವರಾಜ್ ಸಿ.ಎನ್, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ವೆಂಕಟಸ್ವಾಮಿ, ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಕಾಶ್ ರಾವ್ ಮಾಹಿತಿ ನೀಡಿದರು. ಸಭೆಯಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು, ವ್ಯವಸ್ಥಾಪನಾ ನಿರ್ದೇಶಕ ಸುರೇಶ್ ಕುಮಾರ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಬಿ. ಪ್ರಸಾದ್ ಕೌಶಲ್ ಶೆಟ್ಟಿ ಮತ್ತು ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪುರುಷೋತ್ತಮ್, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಇದ್ದರು. ನಿರ್ದೇಶಕರಾದ ಟಿ.ಜಿ ರಾಜರಾಮ್ ಭಟ್, ವಾದಿರಾಜ್ ಎಂ.ಶೆಟ್ಟಿ, ದೇವಿ ಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ್ ರೈ, ರಾಜು ಪೂಜಾರಿ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಜೈರಾಜ್ ಬಿ. ರೈ, ಹರಿಶ್ಚಂದ್ರ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಎಸ್‍ಸಿಡಿಸಿಸಿ ರವೀಂದ್ರ ಬಿ. ಭಾಗವಹಿಸಿದ್ದರು. ಕೊರೊನೋತ್ತರ ಸಹಕಾರ ಸಂಸ್ಥೆಗಳ ಜವಾಬ್ದಾರಿ ಮತ್ತು ಪಾತ್ರ’ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಸಪ್ತಾಹವನ್ನು ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಗುವುದೆಂದು ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. |