ಕರಾವಳಿಗೆ ರೆಡ್ ಅಲರ್ಟ್‌ ಘೋಷಣೆ- ಮೀನುಗಾರರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ, ಜೂ.21(ಉಡುಪಿ ಟೈಮ್ಸ್ ವರದಿ): ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಆದುದರಿಂದ ರಾಜ್ಯದ ಮೂರು ಕರಾವಳಿ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದರೊಂದಿಗೆ ಜೂ.22ರಿಂದ 24ರ ನಡುವಿನ ಅವಧಿಯಲ್ಲಿ ಸಾಧಾರಣದಿಂದ (64.5ಮಿ.ಮೀ- 115.5ಮಿ.ಮೀ.)ದಿಂದ ಭಾರೀ ಮಳೆ (115.5 ರಿಂದ 204.4ಮಿ.ಮೀ) ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ 204.4ಮಿ.ಮೀ.ಗಿಂತಲೂ ಅಧಿಕ ಮಳೆ ಬೀಳುವ ಸಾಧ್ಯತೆ ಇದ್ದು ರಾಜ್ಯ ಕರಾವಳಿಯಲ್ಲಿ ರೆಡ್ ಅಲರ್ಟ್‌ನ್ನು ಘೋಷಿಸಲಾಗಿದೆ ಎಂದು ಹಮಾಮಾನ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಅಲ್ಲದೇ ಇಂದು ಸಂಜೆಯಿಂದ ಜೂ.21ರ ಮಧ್ಯರಾತ್ರಿ11:30ರವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಿಂದ ಮಂಗಳೂರಿನವರೆಗೆ, ಉಡುಪಿ ಜಿಲ್ಲೆಯ ಬೈಂದೂರಿನಿಂದ ಕಾಪುವಿನವರೆಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಮಜಲಿವರೆಗಿನ ಕಡಲಿನಲ್ಲಿ 2.0ಮೀ.ನಿಂದ 2.7ಮೀ.ವರೆಗಿನ ಎತ್ತರದ ಸಮುದ್ರದಲೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ.

ಮಾತ್ರವಲ್ಲದೆ ಇಂದು ಸಂಜೆಯಿಂದ ಜೂ.21ರ ಮಧ್ಯರಾತ್ರಿ11:30ರವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಿಂದ ಮಂಗಳೂರಿನವರೆಗೆ, ಉಡುಪಿ ಜಿಲ್ಲೆಯ ಬೈಂದೂರಿನಿಂದ ಕಾಪುವಿನವರೆಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಮಜಲಿವರೆಗಿನ ಕಡಲಿನಲ್ಲಿ 2.0ಮೀ.ನಿಂದ 2.7ಮೀ.ವರೆಗಿನ ಎತ್ತರದ ಸಮುದ್ರದಲೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!