ಜೂ.22: ಬಡಗಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ 12ಲಕ್ಷ ರೂ.ಮೌಲ್ಯದ ಪರಿಕರ ವಿತರಣೆ

ಉಡುಪಿ, ಜೂ.21: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ವತಿಯಿಂದ ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ ಸುಮಾರು 12 ಲಕ್ಷ ರೂ. ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಜೂ.22ರ ಪೂರ್ವಾಹ್ನ 10 ಗಂಟೆಗೆ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ.

ಸಹಕಾರಿ ಕ್ಷೇತ್ರದಲ್ಲಿ ಸಾಧನೆಯೊಂದಿಗೆ ಸಮಾಜದ ಎಲ್ಲಾ ವರ್ಗಗಳ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಾ ವಿವಿಧ ಸಾಮಾಜಿಕ, ಆರ್ಥಿಕ ಸೇವೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಶತಮಾನೋತ್ಸವವನ್ನು ಆಚರಿಸಿ ಮುನ್ನಡೆಯುತ್ತಿರುವ ಬಡಗುಬೆಟ್ಟು ಸೊಸೈಟಿ ಸಾಮಾಜಿಕ ಕಳಕಳಿಯ ಭಾಗವಾಗಿ ವಾರ್ಷಿಕ ಸುಮಾರು 20 ಲಕ್ಷ ರೂ.ಗಳಷ್ಟು ಮೊತ್ತವನ್ನು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸುತ್ತಿದೆ ಎಂದು ಬಡಗುಬೆಟ್ಟು ಸೊಸೈಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದೀಗ ಉಡುಪಿ ಜಿಲ್ಲೆಯ ಸುಮಾರು 25 ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಜೂ.22ರಂದು ನಗರದ ಪುರಭವನ ದಲ್ಲಿ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ವನ್ನು ಆಯೋಜಿಸುತ್ತಿದೆ.

ಕಾರ್ಯಕ್ರಮವನ್ನು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಯಶಪಾಲ್ ಸುವರ್ಣ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್. ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್‌ ಕುಮಾರ್ ಎಸ್.ವಿ. ಉಪಸ್ಥಿತರಿರುವರು.

ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದು, ಎಂಜಿಎಂ ಕಾಲೇಜಿನ ನಿವೃತ್ತ ರಾಜಕೀಯ ಶಾಸ್ತ್ರ ಉಪನ್ಯಾಸಕರಾದ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ.ಶೇರಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!