ಗ್ರಾ.ಪಂ.ಕಾರ್ಯದರ್ಶಿಗಳು ಜನನ, ಮರಣ ಉಪ ನೋಂದಣಾಧಿಕಾರಿಗಳಾಗಿ ಕಾರ್ಯ: ಸುತ್ತೋಲೆ
ಬೆಂಗಳೂರು: ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಜನನ, ಮರಣ ಉಪ ನೋಂದಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುವಂತೆ ಜನನ ಮರಣಗಳ ಮುಖ್ಯ ನೋಂದಣಾಧಿಕಾರಿ ಹಾಗೂ ಅಪರ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಪ್ರಸಕ್ತ ಸಾಲಿನ ಜು.1ರಿಂದ ಜಾರಿಗೆ ಬರುವಂತೆ ಗ್ರಾಮೀಣ ಪ್ರದೇಶಕ್ಕೆ ಅನ್ವಯವಾಗುವಂತೆ ಸರಕಾರದ ಈ ಆದೇಶವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಈ ಕೆಳಕಂಡ ಅಂಶಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘಟಿಸುವ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳೊಳಗೆ ಜನನ, ಮರಣ ಉಪ ನೋಂದಣಾಧಿಕಾರಿಗಳಾದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ನಿಯಮಾನುಸಾರ ನೋಂದಣಿ ಮಾಡಬೇಕು. ಘಟನೆ ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿ ಉಚಿತವಾಗಿ ಒಂದು ಪ್ರಮಾಣ ಪತ್ರವನ್ನು ವಿತರಿಸಬೇಕು.