ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ- ಶಾಸಕ ಪೂಂಜಾ ಸೇರಿ 65 ಮಂದಿಗೆ ಸಮನ್ಸ್
ಬೆಳ್ತಂಗಡಿ, ಜೂ 27: ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬೆದರಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧ ಪಟ್ಟಂತೆ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಮತ್ತಿತರರಿಗೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಮೇ.18 ರಂದು ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ 28 ಮಂದಿ ಮತ್ತು ಮೇ 20ರಂದು ಆಡಳಿತ ಸೌಧದ ಮುಂಭಾಗದಲ್ಲಿ ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದ 2ನೇ ಕೇಸ್‌ನಲ್ಲಿ 37 ಮಂದಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಜುಲೈ 10ರಂದು ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ನ ನ್ಯಾಯಾಧೀಶರ ಎದುರು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.