ಮಂಗಳೂರು: ನಾಳೆ (ಜೂ.28) ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯುಸಿ ವರೆಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 28ರ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳು, ಅಂಗನವಾಡಿ, ಪ್ರೌಢಶಾಲೆ ಹಾಗೂ ಪಿಯುಸಿ ಕಾಲೇಜ್ ಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜೂನ್ 28 ರಂದು ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.