ಹಾವೇರಿ: ಬ್ಯಾಡಗಿಯಲ್ಲಿ ಭೀಕರ ರಸ್ತೆ ಅಪಘಾತ- 13 ಮಂದಿ ಸಾವು

ಹಾವೇರಿ: ಇಂದು ನಸುಕಿನ ಜಾವ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು -ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಮಂದಿ ಮೃತಪಟ್ಟಿದ್ದಾರೆ.

ನಿಂತಿದ್ದ ಟ್ರಕ್’ಗೆ ಹಿಂದಿನಿಂದ ಟಿಟಿ ವಾಹನ ಬಂದು ಡಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದ ರಭಸಕ್ಕೆ ಟಿಟಿ ವಾಹನದಲ್ಲಿ ದ್ದ 7 ಮಂದಿ ಮಹಿಳೆಯರು ಸೇರಿ 13 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಪರಶುರಾಮ್​​(45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ ಬಾಯಿ (65), ಪುಣ್ಯ (50), ಮಂಜುಳಾಬಾಯಿ, ಚಾಲಕ ಆದರ್ಶ್(23), ಮಾನಸ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ.

ಟೆಂಪೋ ಟ್ರಾವೆಲರ್‌ ಚಾಲಕ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾನೆ. ದಾರಿಹೋಕರು 112 ಗೆ ಕರೆ ಮಾಡಿದರು. ತಕ್ಷಣ ವೈದ್ಯಕೀಯ ತಂಡವು ಸ್ಥಳಕ್ಕೆ ತಲುಪಿತು. ಚಾಲಕ ನಿದ್ದೆ ಮಂಪರಿನಲ್ಲಿ ಅಜಾಗರೂಕತೆಯಿಂದ ಚಲಾಯಿಸಿ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.

ಎಲ್ಲರೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್​ಎಹಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನೆಯಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!