ಉಡುಪಿ ಜಿಲ್ಲಾ ಕಾಂಗ್ರೆಸ್: ಇಂದಿರಾ ಗಾಂಧಿ ಪುಣ್ಯಸ್ಮರಣೆ, ವಲ್ಲಭಭಾಯಿ ಪಟೇಲ್‌ ಜನ್ಮ ದಿನಾಚರಣೆ

ಉಡುಪಿ: ಭಾರತವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಿ ಸರ್ವತಂತ್ರ ಸ್ವತಂತ್ರದ ಏಕ ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿರ್ಮಾಣವಾಗುವುದಕ್ಕೆ ಸರ್ದಾರ್ ವಲ್ಲಭ ಭಾಯಿ ಪಟೇಲರ ಕೊಡುಗೆ ಅಪಾರ. ಅವರ ಜನ್ಮ ದಿನವನ್ನು ನೆನಪಿಸಿಕೊಳ್ಳುತ್ತಾ ಹಿಂದುಳಿದ ವರ್ಗದ ಜನತೆಗೆ ಆರ್ಥಿಕ ಸ್ವಾತಂತ್ರ್ಯವನ್ನು ಕೊಟ್ಟ ಧೀಮಂತ ಮಹಿಳೆಯಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ದೇಶ ಎಂದೂ ಮರೆಯದ ವ್ಯಕ್ತಿತ್ವ ಹೊಂದಿದ ದಿವಂಗತ ಇಂದಿರಾ ಗಾಂಧಿಯವರ ಪುಣ್ಯ ದಿನವಾದ ಇಂದು ಅವರನ್ನು ನೆನಪಿಸಿ ಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

ಹಾಗೆಯೇ ಕೇಂದ್ರ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ‘ಕಿಸಾನ್ ಅಧಿಕಾರ್ ದಿವಸ್’ ಆಚರಣೆಯೊಂದಿಗೆ ಮುಂದಿನ ದಿನದಲ್ಲಿ ರೈರ ವಿರೋಧಿ ನೀತಿಯ ವಿರುದ್ಧ ಬ್ರಹತ್ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದರು.


ಅವರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ದಿ. ಸರ್ದಾರ್ ವಲ್ಲಭ ಭಾಯಿ ಪಾಟೇಲ್ ಜನ್ಮದಿನಾಚರಣೆ, ದಿ. ಇಂದಿರಾ ಗಾಂಧಿ ಪುಣ್ಯ ಸ್ಮರಣೆ ಹಾಗೂ ಕಿಸಾನ್ ಅಧಿಕಾರ್ ದಿವಸ ಆಚರಿಸುವ ಸುಸಂದರ್ಭದಲ್ಲಿ ಮಾತನಾಡುತ್ತಿದ್ದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರು ಮಾತನಾಡುತ್ತಾ ದೇಶದ ಐಕ್ಯತೆ, ಭದ್ರತೆ ಹಾಗೂ ಸಮಗ್ರತೆಗೆ ಸರ್ದಾರ್ ವಲ್ಲಭ ಭಾಯಿ ಪಟೇಲರ ಕೊಡುಗೆ ಅಪಾರ. ಸ್ವಾತಂತ್ರ್ಯ ಚಳುವಳಿಯಲ್ಲಿ ಬ್ರಿಟೀಷರ ದಬ್ಬಾಳಿಕೆಯ ವಿರುದ್ಧ ಗಾಂಧೀಜಿಗೆ ಬೆನ್ನೆಲುಬಾಗಿ ನಿಂತು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರು ವಹಿಸಿದ ಪ್ರಮುಖ ಪಾತ್ರ ಹಾಗೂ ರಾಷ್ಟ್ರದ ಏಕತೆಗೆ ಅವರಿಗಿದ್ದ ಬಲವಾದ ಬದ್ದತೆಯು ದೇಶ ಎಂದೂ ಮರೆಯದ ವ್ಯಕ್ತಿತ್ವವಾಗಿದೆ.

ಹಾಗೆಯೇ 15 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಕ್ರಾಂತಿಕಾರಿಕ ಯೋಜನೆಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದ ದಿವಂಗತ ಇಂದಿರಾ ಗಾಂಧಿಯವರ ಪುಣ್ಯತಿಥಿಯಾದ ಇಂದು ಅವರನ್ನು ದೇಶ ನೆನಪಿಸಿಕೊಳ್ಳಬೇಕಾಗಿದೆ. ಬಡತನದಲ್ಲಿರುವ ಮಕ್ಕಳು ಮಾನಸಿಕ, ಶೈಕ್ಷಣಿಕ, ದೈಹಿಕವಾಗಿ ಬೆಳೆಯಬೇಕೆಂಬ ಉದ್ದೇಶದಿಂದ ಅಂಗನವಾಡಿ ಶಾಲೆಯನ್ನು ಪ್ರಾರಂಭಿಸುವುದರೊಂದಿಗೆ ಬಡತನ ನಿರ್ಮೂಲನ ಹಾಗೂ ಸ್ವಾವಂಬನೆಯ ಬದುಕಿಗಾಗಿ, ಪಡಿತರ, ಮಾಸಾಶನ ಹಾಗೂ ಭೂ ಮಸೂದೆಯಂತಹ ಕ್ರಾಂತಿಕಾರಿಕ ಯೋಜನೆಗಳ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾವಲಂಬನೆ ಬದುಕನ್ನು ಹೊಂದುವಂತೆ ಮಾಡಿದರು.

ಕುಂದಾಪುರ ಕಿಸಾನ್ ಘಟಕದ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ಕುಂದಾಪುರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಭುಜಂಗ ಶೆಟ್ಟಿ ಈ ಸಂದರ್ಭದಲ್ಲಿ ಮಾತನಾಡಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಸ್ವಾಗತಿಸಿದರು, ಪ್ರ. ಕಾರ್ಯದರ್ಶಿ ವೈ ಸುಕುಮಾರ್ ವಂದಿಸಿದರು, ಪ್ರ. ಕಾರ್ಯದರ್ಶಿ ಅಣ್ಯಯ್ಯ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.

ಸಮಾರಂಭದಲ್ಲಿ ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಮುಖಂಡರಾದ ಬಿ. ನರಸಿಂಹ ಮೂರ್ತಿ, ವೆರೋನಿಕಾ ಕರ್ನೇಲಿಯೋ, ಭಾಸ್ಕರ್ ರಾವ್ ಕಿದಿಯೂರು, ಹರೀಶ್ ಕಿಣಿ, ಶಬ್ಬೀರ್ ಅಹ್ಮದ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹಬೀಬ್ ಆಲಿ, ರಮೇಶ್ ಕಾಂಚನ್, ರೋಶನಿ ಒಲಿವರ್, ಜ್ಯೋತಿ ಹೆಬ್ಬಾರ್, ಚಂದ್ರಿಕಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಇಸ್ಮಾಯಿಲ್ ಆತ್ರಾಡಿ, ಉದ್ಯಾವರ ನಾಗೇಶ್ ಕುಮಾರ್, ವಿಶ್ವಾಸ್ ಅಮೀನ್, ಸೌರಬ್ ಬಲ್ಲಾಳ್, ಲೂಯಿಸ್ ಲೋಬೋ, ವಿಜಯ ಪೂಜಾರಿ, ಹರೀಶ್ ಶೆಟ್ಟಿ ಪಾಂಗಳ, ಶಶಿಧರ ಶೆಟ್ಟಿ ಎಲ್ಲೂರು, ಯತೀಶ್ ಕರ್ಕೇರಾ, ಉಪೇಂದ್ರ ಮೆಂಡನ್, ಕೇಶವ ಕೋಟ್ಯಾನ್, ಉಪೇಂದ್ರ ಗಾಣಿಗ, ಪ್ರಭಾಕರ ನಾಯಕ್ ಬೈಂದೂರು, ಹರೀಶ್ ಶೆಟ್ಟಿ ಕೀಳಿಂಜೆ, ನಾಗಪ್ಪ ಕೊಟ್ಟಾರಿ ವಂಡ್ಸೆ, ಜಯ ಶೆಟ್ಟಿ ಬನ್ನಂಜೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!