ಹತ್ರಾಸ್‌ ಸತ್ಸಂಗ ಕಾಲ್ತುಳಿತದಲ್ಲಿ 117 ಭಕ್ತರು ಸಾವು: ಉನ್ನತ ಮಟ್ಟದ ತನಿಖೆಗೆ ಸಿಎಂ ಯೋಗಿ ಆದೇಶ

Oplus_131072

ಹತ್ರಾಸ್(ಉತ್ತರಪ್ರದೇಶ) ಜಿಲ್ಲೆಯ ಮುಘಲ್‌ಗರ್ಹಿ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ನೂಕುನುಗ್ಗಲಿನಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 117ಕ್ಕೆ ಏರಿಕೆಯಾಗಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ ಉನ್ನತಮಟ್ಟದ ತನಿಖೆಗೆ ಆದೇಶಿಸಿದ್ದು ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಕಾಲ್ತುಳಿತದಲ್ಲಿ 117 ಮಂದಿ ಸಾವನ್ನಪ್ಪಿರುವುದನ್ನು ಅಲಿಗಢ ರೇಂಜ್ ಐಜಿ ಶಲಭ್ ಮಾಥುರ್ ಸ್ಪಷ್ಟಪಡಿಸಿದ್ದಾರೆ. ಇನ್ನು 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಪೈಕಿ ಹೆಚ್ಚಿನವರು ಹತ್ರಾಸ್ ಮತ್ತು ಇಟಾಹ್ ನಿವಾಸಿಗಳು ಎಂದು ಹೇಳಲಾಗಿದೆ.

ಈ ಬಾರಿ ಸತ್ಸಂಗವನ್ನು ನಿನ್ನೆ ಮಂಗಳವಾರದಂದು ಹತ್ರಾಸ್ ಜಿಲ್ಲೆಯ ಸಿಕಂದರಾವು ತಹಸಿಲ್ ರಾಷ್ಟ್ರೀಯ ಹೆದ್ದಾರಿಯ ಫುಲ್ರೈ ಮುಘಲ್‌ಗರ್ಹಿ ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಸತ್ಸಂಗಕ್ಕೆ ಸುಮಾರು 15 ಸಾವಿರಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು ಎಂದು ಹೇಳಲಾಗುತ್ತಿದೆ. ಸಭೆ ಮುಗಿಯುವ ವೇಳೆಗೆ ಸಾಕಷ್ಟು ಆರ್ದ್ರತೆ ಉಂಟಾಗಿದ್ದು, ಜನರು ಹೊರಗೆ ಬರುತ್ತಿದ್ದಾಗ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

ಮೃತರ ಕುಟುಂಬಕ್ಕೆ ಮೋದಿ ಸಂತಾಪ; 2 ಲಕ್ಷ ಪರಿಹಾರ ಘೋಷಣೆ

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿದೆ. ಯುಪಿ ಸರ್ಕಾರವು ಎಲ್ಲಾ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಲ್ಲಿ ತೊಡಗಿದೆ. ಇದರಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡವರಿಗೆ ನನ್ನ ಸಹಾನುಭೂತಿ ಇದೆ. ಇನ್ನು ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಮೃತರ ಕುಟಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ

ಹತ್ರಾಸ್ ಇಲ್ಲಿ ಸಂಭವಿಸಿದ ದುರದೃಷ್ಟಕರ ಅಪಘಾತದಲ್ಲಿ ಜೀವಹಾನಿ ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ. ಯುದ್ಧೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಮೃತರ ಕುಟಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!