ಮಂಗಳೂರು: ನಿರ್ಮಾಣ ಹಂತದ ಕಟ್ಟದಲ್ಲಿ ಭೂಕುಸಿತ-ಮಣ್ಣಿನಡಿ ಸಿಲುಕಿದ ಕಾರ್ಮಿಕರಿಬ್ಬರು
ಮಂಗಳೂರು: ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಕಾರ್ಮಿಕರಿಬ್ಬರು ಮಣ್ಣಿನಡಿ ಸಿಲುಕಿದ ಘಟನೆ ಇಂದು ನಡೆದಿದೆ.
ಸ್ಥಳಕ್ಕೆ ಅಧಿಕಾರಿಗಳು, ಎಸ್ ಡಿಆರ್ ಎಫ್ ಪಡೆಗಳು ದೌಡಾಯಿಸಿದ್ದು, ರಕ್ಷಣ ಕಾರ್ಯ ನಡೆಯುತ್ತಿದೆ. ಇಬ್ಬರು ಕಾರ್ಮಿಕರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಲ್ಮಠ ರಸ್ತೆ ಬದಿಯಲ್ಲಿ ಖಾಸಗಿ ನಿರ್ಮಾಣಕ್ಕೆ ಸಂಸ್ಥೆಗೆ ಸೇರಿದ ಜಾಗ ಇದಾಗಿದೆ.